ಲಖನೌ:ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹೊಗಳಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಪತ್ನಿಯ ಮುಖಕ್ಕೆ ಬಿಸಿ ದಾಲ್​ ಎರಚಿ ಆಕೆಗೆ ತ್ರವಳಿ ತಲಾಕ್​ ನೀಡಿರುವ ಘಟನೆ ಉತ್ತರಪ್ರದೇಶದ ಬಹ್ರೈಚ್​ನಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ಮಹಿಳೆಯ ಪತಿ ಅರ್ಷದ್​, ಸಿಮ್ರಾನ್, ಅತ್ತೆ ರೈಸಾ, ಮಾವ ಇಸ್ಲಾಂ, ಫರ್ಹಾನ್ ಮತ್ತು ಶಫಾಫ್ ಎಂಬುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ FIR ದಾಖಲಾಗಿದ್ದು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ, ವೃಂದಾ ಶುಕ್ಲಾ, ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಯೋಧ್ಯೆಯ ಅರ್ಷದ್ ಅವರನ್ನು ಬಹ್ರೈಚ್​ ಮೂಲದ ಮರಿಯನ್​ ಷರೀಫ್​ ಅವರನ್ನು ವಿವಾಹವಾಗಿದ್ದರು. ಅಯೋಧ್ಯೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಹಿಳೆ ಆಕೆಯ ಪತಿ ಜೊತೆ ಮಾತನಾಡುವ ವೇಳೆ ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಹೊಗಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪತಿ ಆಕೆಯನ್ನು ತವರು ಮನೆಗೆ ಕಳುಹಿಸಿದ್ದಾನೆ.
ಇದನ್ನೂ ಓದಿ:ಅಪ್ರಾಪ್ತೆ ಅತ್ಯಾಚಾರ ಕೇಸ್​; ಪೊಲೀಸರಿಂದ ತಪ್ಪಿಸಿಕೊಂಡು ಕೆರೆಗೆ ಹಾರಿ ಪ್ರಾಣಬಿಟ್ಟ ಪ್ರಮುಖ ಆರೋಪಿ
ಸ್ವಲ್ಪ ದಿನಗಳ ಬಳಿಕ ಆಕೆಗೆ ತಲಾಕ್​ ನೀಡಿದ್ದು, ಈ ಬಗ್ಗೆ ಕೇಳಲು ಪತಿಯ ಮನೆ ಬಳಿ ಹೋದಾಗ ಆಕೆಯ ಮುಖದ ಮೇಲೆ ಬಿಸಿ ಸಾಂಬಾರ್​ ಎರಚಿದ್ದಾರೆ. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ನೀಡಿದ ದೂರನ್ನು ಆಧರಿಸಿ ಪತಿ ಸೇರಿದಂತೆ ಆತನ ಕುಟುಂಬಸ್ಥರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತೆ ಮರಿಯಮ್​ ಷರೀಫ್​ ಮಾತನಾಡಿ, ಯೋಗಿಜಿ ಮತ್ತು ಮೋದಿಜಿ ಅದ್ಭುತವಾದ ಕೆಲಸ ಮಾಡಿದ್ದಾರೆ ಎಂದು ನಾನು ಹೇಳಿದೆ. ನನ್ನ ಗಂಡ ಮತ್ತು ನನ್ನ ಅತ್ತೆಯವರಿಗೆ ಇದು ಇಷ್ಟವಾಗಲಿಲ್ಲ. ಅವರು ನನ್ನನ್ನು ನಿಂದಿಸಿದರು ಮತ್ತು ಥಳಿಸಿ ನನ್ನನ್ನು ತವರು ಮನೆಗೆ ಕಳುಹಿಸಿದರು. ಹಿರಿಯರ ಸಮ್ಮುಖದಲ್ಲಿ ನಡೆದ ರಾಜಿಸಂಧಾನ ನಡೆದಿತ್ತು. ಇದಾದ ಬಳಿಕ ಆಗಸ್ಟ್​ 05ರಂದು ನನ್ನ ಪತಿ ಸಿಎಂ ಯೋಗಿ ಹಾಗೂ ಪ್ರಧಾನಿ ಮೋದಿಯನ್ನು ನಿಂದಿಸಲು ಶುರು ಮಾಡಿದರು. ಏಕೆ ಎಂದು ಪ್ರಶ್ನಿಸಿದ್ದಕ್ಕೆ ಪತಿಯ ಕುಟುಂಬಸ್ಥರು ನನ್ನ ಮೇಲೆ ಹಲ್ಲೆ ಮಾಡಿ ಮುಖದ ಮೇಲೆ ಬಿಸಿ ಸಾರನ್ನು ಎರಚಿದರು. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಪತ್ರ ಬರೆಯಲಾಗಿದ್ದು, ಕಠಿಣ ಕ್ರಮ ಜರುಗಿಸುತ್ತಾರೆ ಎಂಬ ಭರವಸೆ ನನಗಿದ ಎಂದು ಸಂತ್ರಸ್ತೆ ಮರಿಯಮ್​ ಷರೀಫ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
