ಮೊರೆನಾ:ತಮಾಷೆಗಾಗಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಇದನ್ನೂ ಓದಿ:ಸ್ವಾತಂತ್ರ್ಯ ದಿನಾಚರಣೆ ವೇಳೆ ವೇದಿಕೆ ಮೇಲೆಯೇ ಕುಸಿದು ಬಿದ್ದ ಸಚಿವ..ಮೊರೆನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು ಕಲ್ಲು ತೂರಾಟ ನಡೆಸಿದ ಆರೋಪಿಯನ್ನು ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ದೆಹಲಿಗೆ ಹೋಗುತ್ತಿತ್ತು. ಈ ವೇಳೆ ಬಾನ್‌ಮೋರ್‌ ರೈಲು ನಿಲ್ದಾಣದ ಬಳಿ ರೈಲಿಗೆ ಕಲ್ಲು ತೂರಾಟ ನಡೆದಿದೆ. ಘಟನೆಯಿಂದಾಗಿ ರೈಲಿನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ.ಈ ಕಲ್ಲು ತೂರಾಟದ ನಂತರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಕೋಲಾಹಲ ಉಂಟಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಇದೀಗ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ವೇಳೆ ಆರೋಪಿಯು ಕಲ್ಲು ತೂರಾಟ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೇ, ತಾನು ಈ ಕೃತ್ಯವನ್ನು ತಮಾಷೆಗಾಗಿ ಮಾಡಿದ್ದೇನೆ ಎಂದು ಹೇಳಿದ್ದಾನೆ.ಇದನ್ನೂ ಓದಿ:ಆಟವಾಡುತ್ತಿದ್ದಾಗ ನೀರಿನ ಬಕೆಟ್‌ಗೆ ಬಿದ್ದು ಪ್ರಾಣ ಬಿಟ್ಟ 16 ತಿಂಗಳ ಮಗುಬಂಧಿತ ಫಿರೋಜ್‌ ಖಾನ್‌ನ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲವಾದರೂ, ಯುವಕನ ಕುರಿತು ಇನ್ನೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಣಿ ಕಮಲಾಪತಿ-ಹಜರತ್ ನಿಜಾಮುದ್ದೀನ್ ವಂದೇ ಭಾರತ್ ರೈಲನ್ನು ಈ ವರ್ಷದ ಏಪ್ರಿಲ್‌ನಲ್ಲಿ ಲೋಕಾರ್ಪಣೆಗೊಳಿಸಲಾಗಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 4 =
Remember me
