ಮುಂಬೈ:ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಪ್ರಸಿದ್ಧ ಗಾದೆ ಮಾತಿದೆ. ಆದರೆ, ಕೆಲವೊಮ್ಮೆ ಜಗಳಗಳು ವಿಕೋಪಕ್ಕೆ ತಿರುಗಿ ಅಪರಾಧ ಪ್ರಕರಣಗಳೂ ನಡೆದು ಹೋಗುತ್ತವೆ.
ಇದೀಗ ಘಟನೆ ಒಂದರಲ್ಲಿ ವ್ಯಕ್ತಿಯೋರ್ವ ತನ್ನ ಹೆಂಡತಿಯ ಮೇಲಿನ ಸಿಟ್ಟಿನಿಂದ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್​ನಗರ ಜಿಲ್ಲೆಯ ಕಾರ್ಜಟ್​ ಪ್ರದೇಶದಲ್ಲಿರುವ ಅಲ್ಸುಂಡೆ ಎಂಬ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಕಾರು ಪಲ್ಟಿಯಾಗಿ ಹೆಡ್​ಕಾನ್ಸ್​ಟೇಬಲ್​ ಮೃತ್ಯು
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಅಹ್ಮದ್​ನಗರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಆರೋಪಿ ಗೋಕುಲ್​ ಕ್ಷೀರಸಾಗರ್​(38) ಪತ್ನಿಯೊಂದಿಗೆ ಜಗಳವಾಡಿ ತನ್ನ ಇಬ್ಬರು ಮಕ್ಕಳನ್ನೂ ಕರೆದುಕೊಂಡು ಮನೆಯಿಂದ ಹೊರ ಬಂದಿದ್ದಾನೆ. ಬಳಿಕ ಸಿಟ್ಟಿನಲ್ಲಿ ಊರಿನ ಮುಂಭಾಗ ಇರುವ ಬಾವಿಯೊಂದರಲ್ಲಿ ತನ್ನ ಇಬ್ಬರು ಮಕ್ಕಳನ್ನು ತಳ್ಳಿದ್ದಾನೆ.
ಮಕ್ಕಳನ್ನು ಬಾವಿಗೆ ತಳ್ಳಿರುವ ವಿಚಾರ ತಿಳಿದ ಪತ್ನಿ ಕೂಡಲೇ ಸ್ಥಳಕ್ಕೆ ತೆರಳಿ ಪೊಲೀಸರು ಹಾಗೂ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳ ತಂಡ ಮಕ್ಕಳಿಬ್ಬರ ಮೃತದೇಹಗಳನ್ನೂ ಬಾವಿಯಿಂದ ಹೊರತೆಗೆದಿದ್ದಾರೆ. ಗೋಕುಲ್​ನ ಪತ್ನಿ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ(IPC Section) 302(ಕೊಲೆ)ರ ಅಡಿ FIR ದಾಖಲಿಸಿಕೊಳ್ಳಲಾಗಿದೆ ಎಂದು ಅಹ್ಮದ್​ನಗರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
