ಬಿಹಾರ:ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ನೋಡಲು ಭದ್ರತಾ ಸಿಬ್ಬಂದಿಗಳ ಮಧ್ಯೆ ನುಸುಳಿ ವೇದಿಕೆಯ ಮೇಲೆ ವ್ಯಕ್ತಿಯೊಬ್ಬ ಓಡಿ ಬಂದಿದ್ದು, ಆತನನ್ನು ತಡೆದು, ಹೊರಗೆ ಕಳುಹಿಸಿರುವ ಘಟನೆ ಇಂದು ಬಿಹಾರದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸ್ವಾತಂತ್ರ್ಯ ದಿನಾಚರಣೆ ವೇಳೆ ವೇದಿಕೆ ಮೇಲೆಯೇ ಕುಸಿದು ಬಿದ್ದ ಸಚಿವ..
ವ್ಯಕ್ತಿಯನ್ನು 26 ವರ್ಷದ ನಿತೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಸಿಎಂ ಅನ್ನು ನೋಡಲು ಭದ್ರತಾ ಸಿಬ್ಬಂದಿಗಳ ಕಣ್ತಪ್ಪಿಸಿ ಓಡಿ ಬರಲು ಕಾರಣವೇನು ಎಂದು ಪ್ರಶ್ನಿಸಿದಕ್ಕೆ ಉತ್ತರಿಸಿದ ನಿತೀಶ್​, “ಬಿಹಾರ ಮಿಲಿಟರಿ ಪೊಲೀಸ್ (BMP) ಸಿಬ್ಬಂದಿಯಾಗಿದ್ದ ನನ್ನ ತಂದೆ, ಕೆಲವು ವರ್ಷಗಳ ಹಿಂದೆ ಕರ್ತವ್ಯದಲ್ಲಿ ಸಾವನ್ನಪ್ಪಿದರು. ಅವರ ಉದ್ಯೋಗವನ್ನು ಪಡೆಯುವ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸಬೇಕಿತ್ತು” ಎಂದು ಹೇಳಿದ್ದಾರೆ.
ಸಿಎಂ ನಿತೀಶ್​ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ, ವ್ಯಕ್ತಿ ಕೈಯಲ್ಲಿ ಬಿತ್ತಿ ಪತ್ರ ಹಿಡಿದು, ಹೈ-ಸೆಕ್ಯುರಿಟಿಯನ್ನು ಭೇದಿಸಿ, ಪ್ರವೇಶಿಸಲು ಯತ್ನಿಸಿದ್ದಾರೆ. ಆದ್ರೆ, ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಅವರನ್ನು ತಡೆದು, ಜಿಲ್ಲಾಡಳಿತ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ವ್ಯಕ್ತಿಯನ್ನು ಮುಂಗೇರ್ ಜಿಲ್ಲೆಯ ನಿವಾಸಿ ದಿವಂಗತ ರಾಜೇಶ್ವರ ಪಾಸ್ವಾನ್ ಅವರ ಪುತ್ರ ನಿತೀಶ್ ಕುಮಾರ್ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿಸಲಾಗಿದೆ,(ಏಜೆನ್ಸೀಸ್).
‘ಭೋಲಾ ಶಂಕರ್’ ಬಗ್ಗೆ ಟ್ರೋಲರ್ಸ್​​ ಬೇಸರ; ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
