ಲಖನೌ:ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(RSS) ಕಚೇರಿಯ ಗೋಡೆ ಮೇಲೆ ಮೂತ್ರ ವಿರ್ಸಜನೆ ಮಾಡಿದ ಪರಿಣಾಮ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿರುವ ಘಟನೆ ಉತ್ತರಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ.
ಘಟನೆಯು ಬುಧವಾರ ರಾತ್ರಿ ನಡೆದಿದ್ದು, ಮೂತ್ರ ವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ ಆರ್​ಎಸ್​ಎಸ್​ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಗುಂಡು ಹಾರಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಶಶಾಂಕ್​ ಗುಪ್ತಾ, ಶಿವಾಂಕ್​ ಗುಪ್ತಾ, ಮುಖೇಶ್​ ಗುಪ್ತಾ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಶಹಜಹಾನ್​ಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಕುಮಾರ್​ ಬುಧವಾರ ರಾತ್ರಿ 4 ಮಂದಿ ಪಾನಮತ್ತರಾಗಿ ಆರ್​ಎಸ್​ಎಸ್​ ಕಚೇರಿಯ ಗೋಡೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಕೂಡಲೇ ಇದನ್ನು ಗಮನಿಸಿದ ಕಚೇರಿ ಸಿಬ್ಬಂದಿ ಹಾಗೂ ಕಾರ್ಯಕರ್ತರು ಆರೋಪಿಗಳನ್ನು ಪ್ರಶ್ನಿಸಿದ್ಧಾರೆ.
ಇದನ್ನೂ ಓದಿ:ಕಿರುಕುಳಕ್ಕೆ ಪ್ರತಿರೋಧ ಒಡ್ಡಿದ ಅಪ್ರಾಪ್ತ ವಯಸ್ಕಳಿಗೆ ಸ್ಯಾನಿಟೈಸರ್​ ಕುಡಿಸಿ ಹತ್ಯೆ
ಕಚೇರಿ ಸಿಬ್ಬಂದಿ ಹಾಗೂ ಕಾರ್ಯಕರ್ತರ ಜೊತೆ ವಾಗ್ವಾದ ನಡೆಸಿದ ಆರೋಪಿಗಳು ಕೆಲ ಕ್ಷಣಗಳ ಬಳಿಕ 50 ಮಂದಿಯನ್ನು ಕರೆದುಕೊಂಡು ಬಂದು ಕಚೇರಿ ಅಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಭಾರತ ದಂಡ ಸಂಹಿತೆ(IPC Section) 307(ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ದುಷ್ಕರ್ಮಿಗಳನ್ನು ಪತ್ತೆ ಗಚ್ಚಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + ten =
Remember me
