ನವದೆಹಲಿ:ಮೆಟ್ರೋ ನಿಲ್ದಾಣದಲ್ಲಿ ಸುಸಜ್ಜಿತವಾದಂತಹ ಎಲ್ಲಾ ಸೌಲಭ್ಯಗಳು ಇರುತ್ತವೆ. ಶುಚಿತ್ವಕ್ಕೆ ಮಹತ್ವ ನೀಡುವ ಮೆಟ್ರೋ ನಿಲ್ದಾಣಗಳು, ಪ್ರಯಾಣಿಕರಿಗಾಗಿ ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಮಾಡಿರುತ್ತದೆ. ಹೀಗಿದ್ದೂ ಇಲ್ಲೊಬ್ಬ ವ್ಯಕ್ತಿ ಮೆಟ್ರೋ ರೈಲಿನ ಹಳಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿ ಬೇಜವಾಬ್ದಾರಿ ಮೆರೆದಿದ್ದಾನೆ.
ದೆಹಲಿಯ ಮೆಟ್ರೋ ನಿಲ್ದಾಣದ ಹಳಿಗಳ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಅನೇಕರು ವ್ಯಕ್ತಿಯ ಅಸಭ್ಯ ವರ್ತನೆಯ ಬಗ್ಗೆ ಟೀಕಿಸುತ್ತಿದ್ದಾರೆ. ಕೂಡಲೇ ಈತನನ್ನು ಪತ್ತೆ ಹಚ್ಚಿ ಅಧಿಕ ಮೊತ್ತದ ದಂಡ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಟ್ವೀಟರ್​​ನಲ್ಲಿ ಈ ವಿಡಿಯೋವನ್ನು ದೆಹಲಿ ಮೆಟ್ರೋ ನಿಗಮ ಹಾಗೂ ಮುಖಮಂತ್ರಿ ಕಚೇರಿಗೆ ಪೋಸ್ಟ್ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ದೆಹಲಿ ಮೆಟ್ರೋದ ಹಿರಿಯ ಅಧಿಕಾರಿಯೊಬ್ಬರು, ನಿಲ್ದಾಣದೊಳಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ಆದ್ಯತೆ ನೀಡಲಾಗುತ್ತದೆ. ಇಂತಹ ಯಾವುದೇ ಚಟುವಟಿಕೆ ಕಂಡುಬಂದಲ್ಲಿ ಪ್ರಯಾಣಿಕರು ಹತ್ತಿರದ DMRC ಅಧಿಕಾರಿಯನ್ನು ಸಂಪರ್ಕಿಸಬಹುದು ಅಥವಾ ನಮ್ಮ 24×7 ಸಹಾಯವಾಣಿ ಸಂಪರ್ಕಿಸಬಹುದು. ಇದರಿಂದ ಕೂಡಲೇ ತಕ್ಷಣದ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದಿದ್ದಾರೆ.
ವೈರಲ್ ಆಗಿರುವ ವಿಡಿಯೋವನ್ನು ಗಮನಿಸಿದಾಗ, ವ್ಯಕ್ತಿಯೊಬ್ಬ ನೀವು ಎಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದೀರಿ ಎಂದು ಕೇಳಿದಾಗ,’ಹೋ ಗಯಾ, ಜ್ಯಾದಾ ಹೋ ಗಯಾ’ ಎಂದು ಉತ್ತರಿಸಿರುವುದು ತಿಳಿಯುತ್ತದೆ.
@CMODelhi@OfficialDMRCMaybe this Happened first time in Delhi Metro.Just received a video on wtsapp. Sharing with youpic.twitter.com/iJiWUnBpQy— Sanjeev Babbar (@SanjeevBabbar)October 29, 2022
@CMODelhi@OfficialDMRCMaybe this Happened first time in Delhi Metro.Just received a video on wtsapp. Sharing with youpic.twitter.com/iJiWUnBpQy
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + five =
Remember me
