ಉತ್ತರಪ್ರದೇಶ:ಯುವಕನೊಬ್ಬ ತನ್ನ ಸ್ವಂತ ಅಣ್ಣನ ಮಗಳನ್ನು ಮದುವೆಯಾಗಿರುವ ಘಟನೆ ಉತ್ತರಪ್ರದೇಶದ ಜೌನ್‌ಪುರ ಜಿಲ್ಲೆಯ ತಾಜುದ್ದೀನ್‌ಪುರ ಗ್ರಾಮದಲ್ಲಿ ನಡೆದಿದೆ.
ಶುಭಂ, ತನ್ನ ಅಣ್ಣನ ಮಗಳಾದ ರಿಯಾಳನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ತಮ್ಮ ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ಮೊದಲು ಈ ವಿವಾಹಕ್ಕೆ ಇಬ್ಬರ ಮನೆಯವರು ಕೂಡ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಶುಭಂ ಮತ್ತು ರಿಯಾ ಈ ಮೊದಲೇ ನಾವು ಪ್ರೀತಿ ಮಾಡುತ್ತಿದ್ದೇವೆ, ಮದುವೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದು ಗಟ್ಟಿ ತೀರ್ಮಾನವನ್ನು ಮಾಡಿಕೊಂಡಿದ್ದರು. ಈ ಕಾರಣಕ್ಕೆ ಮನೆಯವರು ಕೂಡ ಈ ಮದುವೆಗೆ ಒಪ್ಪಿಗೆ ನೀಡಿದ್ದಾರೆ.
ಇದನ್ನೂ ಓದಿ: ಕನ್ನಡದಲ್ಲಿ ಬಾಲಿವುಡ್​ ನಟನ ಶ್ರೇಯಸ್ಸು : ರಾಧಿಕಾ ಕುಮಾರಸ್ವಾಮಿಗೆ ನಾಯಕನಾಗಿ ಶ್ರೇಯಸ್​ ತಲ್ಪಾಡೆ
ಊರಿನ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಧರ್ಮಕ್ಕೆ ಇದು ವಿರುದ್ಧವಾಗಿದೆ. ನಮ್ಮ ಧರ್ಮದ ಪ್ರಕಾರ ಅಣ್ಣನ ಮಗಳು ಆತನಿಗೂ ಮಗಳು, ಇದು ಪಾಪ ಮದುವೆ, ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶಾಲೆಗೆ ಹೋಗಿದ್ದರೆ ಆ ಸಾವು ಸಂಭವಿಸುತ್ತಿರಲಿಲ್ಲ.. ಯಾದಗಿರಿ ಬಾಲಕ ರಾಮನಗರದಲ್ಲಿ ಸಾವು
ಮದುವೆಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಭಂ ಮತ್ತು ರಿಯಾ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇದೀಗ ನಾವು ಸ್ವಇಚ್ಫೆಯಿಂದ ಮದುವೆಯಾಗಿದ್ದೇವೆ, ಆಕೆ ನನ್ನ ಅಣ್ಣನ ಮಗಳು, ನಾನು ಅವಳಿಗೆ ಚಿಕ್ಕಪ್ಪ ಆಗಬೇಕು ಎಂದು ಶುಭಂ ಹೇಳಿದ್ದಾರೆ.
ತನಗಿಂತ 46 ವರ್ಷ ಚಿಕ್ಕವನ ಜತೆ ಮದುವೆ! 2 ವರ್ಷದ ಬಳಿಕ 83ರ ವೃದ್ಧೆಯ ಪಶ್ಚಾತಾಪದ ಮಾತುಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − ten =
Remember me
