ಮುಂಬೈ:ಗುರುವಾರ ಚಲಿಸುವ ರೈಲಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಆರೋಪಿ ನವಾಜ್​ ಶೇಖ್​ ಕರಿಮ್​(40) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
20 ವರ್ಷದ ಸಂತ್ರಸ್ತೆ ಮೇಲೆ ದೌರ್ಜನ್ಯ ಎಸಗುವ ಮುನ್ನ ಆರೋಪಿಯೂ ಛತ್ರಪತಿ ಶಿವಾಜಿ ರೈಲು ನಿಲ್ದಾಣದಲ್ಲಿ 5ಕ್ಕೂ ಹೆಚ್ಚು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿ ಒಬ್ಬರು ಆರೋಪಿಯೂ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯರನ್ನು ಟಾರ್ಗೆಟ್​ ಮಾಡಿ ಕಿರುಕುಳ ಕೊಡುತ್ತಿದ್ದ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗುವ ಮುನ್ನ ಐದಕ್ಕೂ ಹೆಚ್ಚು ಮಹಿಳೆಯರಿಗೆ ಕಿರುಕುಳ ನೀಡಿರುವುದಾಗಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆದರೆ, ಅವರು ಯಾರು ದೂರು ಕೊಡಲು ಮುಂದೆ ಬಂದಿಲ್ಲ.
ಇದನ್ನೂ ಓದಿ:ಚಲಿಸುವ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ
ಈಗಲೂ ಕಾಲ ಮಿಂಚಿಲ್ಲ ಆರೋಪಿಯಿಂದ ಕಿರುಕುಳಕ್ಕೊಳಗಾದವರು ಮುಂದೆ ಬಂದು ದೂರು ನೀಡಿ. ಯಾರು ಭಯ ಪಡುವ ಅವಶ್ಯಕತೆಯಿಲ್ಲ. ನಿಮ್ಮ ಬೆನ್ನಿಗೆ ಪೊಲೀಸ್​ ಹಾಗೂ ಕಾನೂನು ನಿಂತಿರುತ್ತದೆ ಎಂದು ಹೇಳಿದ್ಧಾರೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಆರೋಪಿಯ ಕೃತ್ಯದ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಹಾಗೂ ವಿಪಕ್ಷಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
