ಹೈದರಾಬಾದ್​ :‘ಪವಾಡ’ಸದೃಶವಾದ ಆಯುರ್ವೇದ ಔಷಧಿಯನ್ನು ಸೇವಿಸಿ ಸುಮಾರು 10 ನಿಮಿಷಗಳ ನಂತರ ಕರೊನಾದಿಂದ ಗುಣಮುಖನಾದೆ ಎಂದು ಹೇಳಿಕೊಂಡಿದ್ದ ವ್ಯಕ್ತಿಯೊಬ್ಬರು ಇಂದು ಆಂಧ್ರಪ್ರದೇಶದ ನೆಲ್ಲೋರಿನಲ್ಲಿ ನಿಧನರಾಗಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ಎನ್​.ಕೋಟಯ್ಯ ಎಂಬುವರು ಮೃತರು.
ವೆಲ್ಲೋರಿನ ಕೃಷ್ಣಪಟ್ನಂನಲ್ಲಿ ಬೊನಿಗಿ ಆನಂದಯ್ಯ ಎಂಬ ಆಯುರ್ವೇದ ವೈದ್ಯರು ನೀಡಿದ ‘ಹರ್ಬಲ್ ಐ ಡ್ರಾಪ್’ ಪಡೆದ ಮೇಲೆ ತಾವು ಥಟ್ಟನೆ ಕೋವಿಡ್​ನಿಂದ ಗುಣಮುಖರಾಗಿದ್ದಾಗಿ ಕೆಲವು ದಿನಗಳ ಹಿಂದೆ ಕೋಟಯ್ಯ ವಿಡಿಯೋ ಮಾಡಿ ಶೇರ್ ಮಾಡಿದ್ದರು. ವೈರಲ್ ಆದ ಈ ವಿಡಿಯೋದಿಂದ ಪ್ರಭಾವಿತರಾಗಿ ಸಾವಿರಾರು ಜನರು ಈ ಪವಾಡಸದೃಶ ಔಷಧಿಗಾಗಿ ಕೃಷ್ಣಪಟ್ನಂನಲ್ಲಿ ಸಾಲುಗಟ್ಟಲು ಆರಂಭಿಸಿದ್ದರು.
ಇದನ್ನೂ ಓದಿ:ಕರೊನಾ ರೂಪದಲ್ಲಿ ಎರಗಿದ ದುರಾದೃಷ್ಟ… ಎರಡನೇ ಬಾರಿ ತಬ್ಬಲಿಯಾದ ಅಂಧ ಬಾಲಕ !
“ಮೇ 28 ರ ರಾತ್ರಿ ಕೋಟಯ್ಯ ಅವರ ಆಕ್ಸಿಜನ್ ಮಟ್ಟ ಇಳಿದ ಕಾರಣದಿಂದ ನೆಲ್ಲೋರ್​ ಸರ್ಕಾರಿ ಜನರಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರಿಗೆ ಹಲವು ಇತರ ಆರೋಗ್ಯ ಸಮಸ್ಯೆಗಳೂ ಇದ್ದವು. ಇಂದು ಮುಂಜಾನೆ ಮೃತಪಟ್ಟರು” ಎಂದು ಜನರಲ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ. ಸುಧಾಕರ್​ ರೆಡ್ಡಿ ಇಂಡಿಯಾ ಟುಡೆ ಟಿವಿಗೆ ತಿಳಿಸಿದ್ದಾರೆ.
ಮತ್ತೊಂದೆಡೆ, ಆನಂದಯ್ಯ ಅವರ ತಂಡದ ಮೂವರು ಸದಸ್ಯರಿಗೆ ರಾಪಿಡ್ ಆ್ಯಂಟಿಜನ್ ಟೆಸ್ಟ್​ನಲ್ಲಿ ಕರೊನಾ ಪಾಸಿಟಿವ್ ಬಂದಿದೆ. ಸುಮಾರು 20 ಗ್ರಾಮಸ್ಥರು ಕರೊನಾ ರೋಗಲಕ್ಷಣಗಳನ್ನು ಪ್ರದರ್ಶಿಸಿದ್ದು, ಅವರ ಸ್ಯಾಂಪಲ್​ಗಳನ್ನು ಆರ್​ಟಿಪಿಸಿಆರ್ ಪರೀಕ್ಷೆಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರು ಸ್ಥಳೀಯವಾದ ಆಯುರ್ವೇದಿಕ್​ ಔಷಧಿಗೆ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್​ ಇನ್ ಆಯುರ್ವೇದಿಕ್ ಸೈನ್ಸಸ್​ನ ಅಧ್ಯಯನ ವರದಿಯ ಆಧಾರದ ಮೇಲೆ ಅನುಮತಿ ನೀಡಿದ್ದಾರೆ. ಆದಾಗ್ಯೂ ಆನಂದಯ್ಯ ಅವರು ತಯಾರಿಸಿರುವ ಐ ಡ್ರಾಪ್ಸ್​ಗೆ ಅನುಮತಿ ಸಿಕ್ಕಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.(ಏಜೆನ್ಸೀಸ್)
ಅಂಧ ದಂಪತಿಯ ಕುಟುಂಬಕ್ಕೆ ಪೊಲೀಸ್​ ಅಧಿಕಾರಿಯ ಸಹಾಯಹಸ್ತ

“ಕೇಜ್ರಿವಾಲ್ ಸರ್ಕಾರ ಕರೊನಾ ಸಾವಿನ ಅಸಲಿ ಸಂಖ್ಯೆಯನ್ನು ಮರೆಮಾಚಿದೆ”

“ಜೂನ್​ ತಿಂಗಳಲ್ಲಿ 10 ಕೋಟಿ ಡೋಸ್ ಕೋವಿಶೀಲ್ಡ್​ ಪೂರೈಕೆ”

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:sixteen − fourteen =
Remember me
