ಮುಂಬೈ:ಟೆಕ್ ಮಹೀಂದ್ರಾ ಕಂಪನಿಯ ಮಾಜಿ ಉಪಾಧ್ಯಕ್ಷ ವಿನೀತ್ ನಯ್ಯರ್ ಅವರು 85 ನೇ ವಯಸ್ಸಿನಲ್ಲಿ ನಿಧನರಾದರು. ಟೆಕ್ ಮಹೀಂದ್ರಾದ ಮಾಜಿ ಎಂಡಿ ಮತ್ತು ಸಿಇಒ ಸಿ.ಪಿ. ಗುರ್ನಾನಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಈ ಸಂಗತಿ ಹಂಚಿಕೊಂಡಿದ್ದಾರೆ.
ಸ್ವಾತಂತ್ರೋತ್ತರ ಭಾರತದಲ್ಲಿ, ನವೆಂಬರ್ 21, 1947 ರಂದು ಭಾರತದಲ್ಲಿ ಜನಿಸಿದ ಅವರು, ಮ್ಯಾಸಚೂಸೆಟ್ಸ್‌ನ ವಿಲಿಯಮ್ಸ್ ಕಾಲೇಜಿನಲ್ಲಿ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು.ಮಾಜಿ ಐಎಎಸ್​ ಅಧಿಕಾರಿಯಾಗಿದ್ದ ನಯ್ಯರ್ ಅವರು ವಿಶ್ವ ಬ್ಯಾಂಕ್‌ನೊಂದಿಗೆ ಎಂಟು ವರ್ಷಗಳ ಕಾಲ ಪೂರ್ವ ಏಷ್ಯಾ ಮತ್ತು ಪೆಸಿಫಿಕ್‌ನ ಇಂಧನ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡಿದರು. ನಂತರ ಅವರು 1986-1991 ರವರೆಗೆ ಐದು ವರ್ಷಗಳ ಕಾಲ ಸಾರ್ವಜನಿಕ ವಲಯದ ಉದ್ಯಮವಾದ ಗೇಲ್​ನ ಮೊದಲ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. 2009ರಲ್ಲಿ ನಯ್ಯರ್​ ಅವರ ಮೇಲ್ವಿಚಾರಣೆಯಲ್ಲಿ, ಹಗರಣ-ಕಳಂಕಿತ ಸತ್ಯಂ ಕಂಪ್ಯೂಟರ್ ಅನ್ನು ಟೆಕ್ ಮಹೀಂದ್ರಾ ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 4 =
Remember me
