ಇಂಫಾಲ್:ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾಗಿ 200ಕ್ಕೂ ಹೆಚ್ಚು ಜನರ ಹತ್ಯೆಗೆ ಮುನ್ನುಡಿ ಬರೆದ ವಿವಾದಿತ ಆದೇಶವನ್ನು ಮಣಿಪುರ ಹೈಕೋರ್ಟ್ ಈಗ ರದ್ದುಗೊಳಿಸಿದೆ. ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ತಾನೇ ನೀಡಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ.
ಇದನ್ನೂ ಓದಿ:ಯೋಜನೆ ಜಾರಿಗೊಳಿಸಲು ಸರ್ಕಾರಗಳಿಗೆ ಆದೇಶಿಸಲಾಗದು: ಸುಪ್ರೀಂಕೋರ್ಟ್​
2023ರ ಮಾ.27ರಂದು ಅಂದಿನ ಹಂಗಾಮಿ ಮುಖ್ಯ ನ್ಯಾಯಾಧೀಶ ನ್ಯಾ. ಎಂ.ವಿ. ಮುರಳೀಧರನ್ ಆದೇಶ ಹೊರಡಿಸಿ, ‘ಮೈತೇಯಿ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಇದನ್ನು ವಿರೋಧಿಸಿದ್ದ ಕುಕಿ ಸಮುದಾಯದವರು, ದಂಗೆ ಎದ್ದಿದ್ದರು. ಆ ಬಳಿಕ ತಿಂಗಳಾನುಗಟ್ಟಲೆ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.
ಈ ನಡುವೆ, ಈ ಆದೇಶ ರದ್ದತಿ ಕೋರಿ ಮಣಿಪುರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಆಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ. ಗೋಲಿ ಗೈಫುಲ್‌ಶಿಲ್ಲು ಅವರು, ‘ಎಸ್ಸಿ -ಎಸ್ಟಿ ಪಟ್ಟಿಗೆ ಜಾತಿಗಳನ್ನು ಸೇರಿಸುವಂತೆ ಸೂಚನೆ ನೀಡುವ ಅಧಿಕಾರ ಕೋರ್ಟ್‌ಗಳಿಗೆ ಇಲ್ಲ ಎಂದು ಸುಪ್ರೀಂಕೋರ್ಟ್ ಈ ಹಿಂದೆ ಪ್ರಕರಣವೊಂದರಲ್ಲಿ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಮೈತೇಯಿಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಆದೇಶವನ್ನು ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರೊಂದಿಗೆ ಜನಾಂಗೀಯ ಸಂಘರ್ಷಕ್ಕೆ ಫುಲ್​ಸ್ಟಾಪ್​ ಹಾಕಿದಂತಾಗಿದೆ.
ಅರ್ಧರಾತ್ರಿಯಲ್ಲಿ ಸಂಪೂರ್ಣ ಕಾಶಿ ಸುತ್ತಿದ ಪ್ರಧಾನಿ.. ನಿಶಾಚರಿಯಂತೆ ಮೋದಿ ಸಂಚರಿಸಿದ್ದಕ್ಕೆ ಹೀಗಿದೆ ಕಾರಣ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 5 =
Remember me
