ಇಂಫಾಲ್​:ಮಣಿಪುರದಲ್ಲಿ ನಡೆದ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ ಪ್ರಕರಣ ಇಡೀ ದೇಶದ ಜನತೆಗೆ ಆಘಾತ ಉಂಟುಮಾಡಿದೆ. ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ದುರುಳರ ಗುಂಪೊಂದು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೆ, ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಸಹ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಅಮಾನವೀಯ ಘಟನೆಯನ್ನು ಪ್ರಧಾನಿ ಮೋದಿ ಸಹ ಖಂಡಿಸಿದ್ದಾರೆ.
ಇದೀಗ ಕರಾಳ ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯರೊಬ್ಬರ ಪತಿ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಪತ್ನಿಯನ್ನು ಬೆತ್ತಲೆ ಮಾಡಿ ರಸ್ತೆಯಲ್ಲಿ ಮೆರವಣಿಗೆ ಮಾಡಿದರೂ ಅದನ್ನು ನೋಡಿ ಏನೂ ಮಾಡಲಾಗದ ಅಸಹಾಯಕತೆಯನ್ನು ಹೇಳಿಕೊಂಡು ಸಂತ್ರಸ್ತೆಯ ಪತಿ ಕಣ್ಣೀರಿಟ್ಟಿದ್ದಾರೆ. ಈ ಘಟನೆ ಮಾನಸಿಕ ಆಘಾತವನ್ನು ಉಂಟು ಮಾಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಶೌಚಕ್ಕೆ ಹೋದಾಗ ಕುಸಿದು ಬಿದ್ದ ಗೋಡೆ! ಮೂವರು ಮಹಿಳೆಯರಿಗೆ ಗಾಯ
ಗುಂಪೊಂದು ಮಹಿಳೆಯರನ್ನು ತಮ್ಮೊಂದಿಗೆ ಬಲವಂತವಾಗಿ ಕರೆದೊಯ್ದರು. ಬಳಿಕ ಬೆತ್ತಲೆಗೊಳಿಸಿದರು. ಅಲ್ಲಿ 2-3 ಮಹಿಳೆಯರಿದ್ದರು. ಅದರಲ್ಲಿ ಒಬ್ಬಳು ನನ್ನ ಪತ್ನಿ. ಇದೇ ವೇಳೆ ಓರ್ವ ಯುವತಿಯನ್ನು ರಕ್ಷಣೆ ಮಾಡಲು ಗ್ರಾಮದ ಜನರು ಬಂದಾಗ ಆ ದುಷ್ಟರ ಗ್ಯಾಂಗ್​ ಯುವತಿಯ ತಂದೆಯ ಮೇಲೆ ಹಲ್ಲೆ ಮಾಡಿ ಕೊಂದು ಹಾಕಿದರು ಎಂದು ವಿವರಿಸಿದರು.
ಸಂತ್ರಸ್ತೆಯ ಪತಿ ನಿವೃತ್ತ ಯೋಧನಾಗಿದ್ದು, ಕಾರ್ಗಿಲ್​ ಯುದ್ಧದಲ್ಲೂ ದೇಶ ಸೇವೆ ಮಾಡಿದ್ದಾರೆ. ದೇಶದ ಪರವಾಗಿ ಶ್ರೀಲಂಕಾದಲ್ಲಿ ಕೆಲಸ  ಮಾಡಿದ್ದಾರೆ. ರಾಷ್ಟ್ರವನ್ನು ರಕ್ಷಣೆ ಮಾಡಿದ ನನಗೆ ನನ್ನ ಪತ್ನಿಯನ್ನು ರಕ್ಷಣೆ ಮಾಡಲು ಆಗಲಿಲ್ಲ ಎಂದು ದುಃಖಿತರಾದರು. ಗ್ರಾಮದ ಜನರಿಂದಲೂ ಸಾಧ್ಯವಾಗಲಿಲ್ಲ ಎಂದರು.
ಇನ್ನು ಈ ಪ್ರಕರಣ ಸಂಬಂಧ ಗುರುವಾರ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯರಿಬ್ಬರನ್ನು ಮಣಿಪುರದಲ್ಲಿ ಪುರುಷರ ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದೆ. ಅಲ್ಲದೆ, ಮಹಿಳೆಯರ ಮೇಲೆ ಗ್ಯಾಂಗ್​ರೇಪ್​ ಸಹ ನಡೆದಿದೆ ಎನ್ನಲಾಗಿದೆ. ಈ ಘಟನೆ ಮೇ 4ರಂದು ಮಣಿಪುರ ರಾಜಧಾನಿ ಇಂಫಾಲ್​ನಿಂದ 35 ಕಿ.ಮೀ. ದೂರದಲ್ಲಿರುವ ಕೊಂಗ್​ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದು, ಜುಲೈ 20ರಂದು ಬೆಳಕಿಗೆ ಬಂದಿದೆ.
ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತೀಸ್​ ಸಮುದಾಯ ಇಟ್ಟಿರುವ ಬೇಡಿಕೆಯ ಕುರಿತು ಮಣಿಪುರದ ಮೈತೀಸ್​ ಮತ್ತು ಕುಕಿ ಬುಡಕಟ್ಟುಗಳ ನಡುವೆ ಘರ್ಷಣೆಗಳು ಉಂಟಾಗಿರುವ ನಡುವೆಯೇ ಈ ಭಯಾನಕ ಘಟನೆಯೂ ನಡೆದಿದೆ. ಇದೇ ವಿಚಾರಕ್ಕೆ ಮಣಿಪುರ ರಾಜ್ಯ ಅನೇಕ ಸಂಘರ್ಷಗಳಿಗೆ ಕಾರಣವಾಗಿದ್ದು, ಅಲ್ಲಿನ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತೆ ಇದೆ.
ಇದನ್ನೂ ಓದಿ:ಬಿಎಂಟಿಸಿ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಸಿದವರಿಗೆ ತಟ್ಟಿದ ದಂಡದ‌ ಬಿಸಿ!
ಮಣಿಪುರದ ಹಿಂಸಾಚಾರದಲ್ಲಿ ಈವರೆಗೂ 120 ಮಂದಿ ಅಸುನೀಗಿದ್ದು, ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಿದ್ದು, ಪರಿಹಾರ ಶಿಬಿರಗಳಲ್ಲಿ ಆಶ್ರಯವನ್ನು ಪಡೆದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿರುವ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಮೊನ್ನೆಯಿಂದ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.(ಏಜೆನ್ಸೀಸ್​)
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಎಚ್ಚರಿಕೆ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಟ್ವಿಟರ್​ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ದೇಶವೇ ತಲೆತಗ್ಗಿಸುವಂತಹ ಘಟನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × two =
Remember me
