ಇಂಫಾಲ್​:ಈಶಾನ್ಯ ರಾಜ್ಯದ ಏಕೈಕ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್​ರ ಅಧಿಕೃತ ನಿವಾಸಕ್ಕೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಇಂಫಾಲ್​ದ ಲ್ಯಾಂಫೆಲ್ ಪ್ರದೇಶದಲ್ಲಿ ಸಚಿವೆಯ ನಿವಾಸವಿದ್ದು, ಬುಧವಾರ ಸಂಜೆ 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಸಚಿವೆ ಕಿಪ್‌ಗೆನ್ ಕುಕಿ ಸಮುದಾಯದ ನಾಯಕಿಯಾಗಿದ್ದು, ಸಚಿವೆಯ ನಿವಾಸದಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ದಾಳಿಕೋರರು ಬೆಂಕಿ ಹಚ್ಚಿದ್ದಾರೆ. ಸುದ್ದಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ:ಸಿಇಟಿ ಫಲಿತಾಂಶ ಪ್ರಕಟ; ಈ ಲಿಂಕ್ ಮೂಲಕ ನಿಮ್ಮ ರಿಸಲ್ಟ್ ತಿಳಿಯಿರಿ…
ಜೂನ್​ 13ರಂದು ಕಾಂಗ್‌ಪೋಕ್ಪಿ ಜಿಲ್ಲೆಯ ಖಮೆನ್‌ಲೋಕ್ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದ ಘಟನೆಯಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟು, ಹಲವಾರು ಜನ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.
ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ಭದ್ರತಾ ಸಿಬ್ಬಂದಿಯು ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ಗಸ್ತು ತಿರುಗುವುದನ್ನು ಮುಂದುವರೆಸಿದ್ದಾರೆ.
ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಟೆಂಗ್ನೌಪಾಲ್ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಿಂದ ಕೆಲವು ಬಂದೂಕು ಮತ್ತು 63 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಣಿಪುರದ ಭದ್ರತಾ ಸಲಹೆಗಾರ ಕುಲ್ದೀಪ್ ಸಿಂಗ್ ಪ್ರಕಾರ, ಇದುವರೆಗೆ ಒಟ್ಟು 1,040 ಶಸ್ತ್ರಾಸ್ತ್ರಗಳು, 13,601 ಮದ್ದುಗುಂಡುಗಳು ಮತ್ತು 230 ವಿವಿಧ ರೀತಿಯ ಬಾಂಬ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಣಿಪುರದ 16 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೆ, ಇಡೀ ಈಶಾನ್ಯ ರಾಜ್ಯದಲ್ಲಿ ಇಂಟರ್​ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 6 =
Remember me
