ಇಂಫಾಲ:ಕೆಲವು ದಿನಗಳಿಂದ ಪ್ರಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ತಲೆಯೆತ್ತಿದೆ. ಈ ಬಾರಿ ಬಂಡುಕೋರರು ಪೊಲೀಸ್ ಅಧಿಕಾರಿಯೊಬ್ಬರನ್ನು ಗುರಿಯಾಗಿಸಿ ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ತೆರಳುತ್ತಿದ್ದ ಪೊಲೀಸ್ ಕಮಾಂಡೋ ಪಡೆಯ ಮೇಲೆ ಸಹ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಪ್ರಾಚೀನ ಆವಿಷ್ಕಾರ, ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ: ರಾಜ್ಯೋತ್ಸವಕ್ಕೆ ಪ್ರಧಾನಿ ಮೋದಿ ಶುಭಾಶಯಗುಂಡೇಟು ತಗುಲಿದ ಚಿಂಗ್ತಾಮ್‌ ಆನಂದ್‌ ಅವರನ್ನು ಪೊಲೀಸ್‌ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಸ್ನಿಫರ್‌ ರೈಫಲ್‌ ಮೂಲಕ ಗುಂಡು ಹಾರಿಸಿದ್ದಾರೆ. ಸಾರ್ವಜನಿಕರ ಓಡಾಟ ಹೆಚ್ಚಿದ್ದರ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿ ದಾಳಿ ನಡೆಸಲು ಹಿಂದೇಟು ಹಾಕಿದ್ದಾರೆ ಎಂದು ಮೂಲಗಳು ಹೇಳಿವೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ.
ಮ್ಯಾನ್ಮಾರ್‌ನ ಗಡಿಯ ವ್ಯಾಪಾರಿ ಕೇಂದ್ರ ಮೊರೆಹ್‌ನಲ್ಲಿ ಹೆಲಿಪ್ಯಾಡ್ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿದ್ದ ಮಣಿಪುರ ಪೊಲೀಸ್ ಅಧಿಕಾರಿ ಚಿಂಗ್ತಮ್ ಆನಂದ್ ಅವರನ್ನು ಬಂಡುಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮಣಿಪುರ ಸರ್ಕಾರ ಬುಧವಾರ ತುರ್ತು ಸಚಿವ ಸಂಪುಟ. ಸಭೆಯ ನಂತರ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ಕೆಲವು ತಿಂಗಳುಗಳಲ್ಲಿ ಜನಾಂಗೀಯ ಘರ್ಷಣೆಯಿಂದ ಪ್ರಕ್ಷುಬ್ಧ ಪರಿಸ್ಥಿತಿ ಎದುರಿಸಿದ್ದ ಮಣಿಪುರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಸಹಜ ಸ್ಥಿತಿಗೆ ತರಲು ಹೆಣಗುತ್ತಿರುವುದರ ನಡುವೆಯೇ ದಂಗೆಕೋರರು ಹಗೆತನ ಬೆಳೆಸಿಕೊಂಡಿದ್ದು, ಪೊಲೀಸ್‌ ಅಧಿಕಾರಿ ಚಿಂಗ್ತಾಮ್‌ ಆನಂದ್‌ ಅವರಿಗೆ ಗುಂಡಿಕ್ಕಿ ಹತ್ಯೆ ಮಾಡಿರುವುದು ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಕುಕಿಗಳ ಕೈವಾಡ:ಮಣಿಪುರದಲ್ಲಿ ಕುಕಿ ಬುಡಕಟ್ಟು ಹಾಗೂ ಮೈತೇಯಿ ಸಮುದಾಯದವರ ಮಧ್ಯೆ ಕಳೆದ ಕೆಲವು ತಿಂಗಳಿಂದ ಸಂಘರ್ಷ ನಡೆಯುತ್ತಿದ್ದು, ರಾಜ್ಯದ ಹಲವೆಡೆ ಇನ್ನೂ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದೆ. ಗಡಿ ಪಟ್ಟಣ ಮೊರೆಹ್‌ನಲ್ಲಿ ಲೂಟಿ ಪ್ರಕರಣಗಳು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಸರ್ಕಾರ ನಿಯೋಜಿಸಿತ್ತು. ಹಲವು ಬುಡಕಟ್ಟು ಸಂಘಟನೆಗಳು ಪೊಲೀಸರ ನಿಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದವು. ಇದರ ಬೆನ್ನಲ್ಲೇ ಹೆಲಿಪ್ಯಾಡ್‌ ಭದ್ರತೆಗೆ ನಿಯೋಜನೆಗೊಂಡಿದ್ದ ಚಿಂಗ್ತಾಮ್‌ ಆನಂದ್‌ ಅವರ ಹತ್ಯೆ ನಡೆದೆ. ಸಿರುವ ಕೃತ್ಯ ನಡೆದಿದೆ. ಇದರ ಹಿಂದೆ ಕುಕಿ ಬಡುಕಟ್ಟು ಸಮುದಾಯದವರ ಪಾತ್ರವಿದೆ ಎಂದು ಶಂಕಿಸಲಾಗಿದೆ.50 ಲಕ್ಷ ರೂ. ಪರಿಹಾರ:ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಸರ್ಕಾರ ಹತ್ಯೆ ಕುರಿತು ತನಿಖೆಗೆ ಆದೇಶಿಸಿದೆ. ಇದೇ ಸಂದರ್ಭದಲ್ಲಿ ಆನಂದ್‌ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದೆ. ಜತೆಗೆ ಅವರ ಕುಟುಂಬದ ಒಬ್ಬ ಅರ್ಹ ವ್ಯಕ್ತಿಗೆ ಸರಕಾರಿ ಕೆಲಸ ನೀಡುವ ಭರವಸೆ ನೀಡಿದೆ.
ಇಂದಿನಿಂದ ಚಳಿ ಹೆಚ್ಚಾಗಲಿದೆ…ದೆಹಲಿ-ಎನ್‌ಸಿಆರ್​​​​​ನಲ್ಲಿ ಈ ವಾರ ಮಂಜು, ದೇಶದ ಹವಾಮಾನ ಅಪ್ ಡೇಟ್ಸ್ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
