ನವದೆಹಲಿ:ಕಳೆದ ಕೆಲವು ತಿಂಗಳುಗಳಿಂದ ಮಣಿಪುರದಲ್ಲಿ ಉಂಟಾಗಿರುವ ಜನಾಂಗೀಯ ಘರ್ಷಣೆಯ ಹಿಂದೆ ವಿದೇಶಿ ಏಜೆನ್ಸಿಗಳು ಕೈವಾಡ ಇರುವುದನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್​ ಮನೋಜ್​ ಮುಕುಂದ್​ ನರಾವಣೆ ತಿಳಿಸಿದ್ದಾರೆ. ಅಲ್ಲದೆ, ಬಂಡಾಯ ಗುಂಪುಗಳಿಗೆ ಚೀನಾ, ಹಣಕಾಸಿನ ನೆರವು ನೀಡುತ್ತಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಇಂಡಿಯಾ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ “ರಾಷ್ಟ್ರೀಯ ಭದ್ರತಾ ದೃಷ್ಟಿಕೋನ” ಎಂಬ ವಿಷಯದ ಕುರಿತು ಪತ್ರಕರ್ತರೊಂದಿಗೆ ಸಂವಾದ ನಡೆಸುವಾಗ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತಾದ ಪ್ರಶ್ನೆಗಳಿಗೆ ನರಾವಣೆ ಅವರು ಉತ್ತರಿಸಿದರು. ಗಡಿ ರಾಜ್ಯದಲ್ಲಿನ ಅಸ್ಥಿರತೆಯು ಇಡೀ ದೇಶದ ರಕ್ಷಣೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದರು.
ಸದ್ಯ ಉನ್ನತ ಸ್ಥಾನದಲ್ಲಿ ಇರುವವರು ಅಗತ್ಯವಾಗಿ ಬೇಕಾದ ಯಾವುದೇ ಕ್ರಮವನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದು, ತಮ್ಮ ಅತ್ಯುತ್ತಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ. ವಿದೇಶಿ ಏಜೆನ್ಸಿಗಳ ಕೈವಾಡವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ವಿದೇಶಿಗರು ಖಂಡಿತವಾಗಿಯೂ ಇದರಲ್ಲಿದ್ದಾರೆ ಎಂದು ನಾನು ಹೇಳುತ್ತೇನೆ. ವಿಶೇಷವಾಗಿ ವಿವಿಧ ಬಂಡಾಯ ಗುಂಪುಗಳಿಗೆ ಚೀನಾ ಆರ್ಥಿಕ ನೆರವು ನೀಡುತ್ತಿರುವ ಸಾಧ್ಯತೆ ಇದೆ. ಹಲವು ವರ್ಷಗಳಿಂದ ಚೀನಾ ಸಹಾಯ ಮಾಡುತ್ತಿದೆ ಮತ್ತು ಈಗಲೂ ಅದನ್ನು ಮುಂದುವರಿಸುತ್ತಿದೆ ಎಂದರು.
ಇದನ್ನೂ ಓದಿ: ಕ್ರಿಕೆಟ್​ ಲೋಕಕ್ಕೆ ವಿದಾಯ ಹೇಳುತ್ತಾರಾ ಭುವನೇಶ್ವರ್ ಕುಮಾರ್? ಸದ್ದು ಮಾಡದೇ ಗುಡ್​ಬೈ ಹೇಳುವ ಹೊಸ ರೀತಿಯೇ ಇದು?
ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಮಾದಕವಸ್ತು ಕಳ್ಳಸಾಗಣೆಯ ಪಾತ್ರದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ನರಾವಣೆ ಅವರು, ಬಗಳ ಹಿಂದಿನಿಂದಲೂ ಅಲ್ಲಿ ಡ್ರಗ್ಸ್​ ಸ್ಮಗ್ಲಿಂಗ್​ ನಡೆಯುತ್ತಲೇ ಇದೆ. ವಶಕ್ಕೆ ಪಡೆಯಲಾಗುತ್ತಿರುವ ಡ್ರಗ್ಸ್​ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಆದರೆ, ಡ್ರಗ್ಸ್​ಗೆ ಇನ್ನು ಕಡಿವಾಣ ಬಿದ್ದಿಲ್ಲ ಎಂದು ಹೇಳಿದರು.
ಏನಿದು ಘಟನೆ?ಕೆಲವು ದಿನಗಳ ಹಿಂದೆ ಟ್ವಿಟರ್​ನಲ್ಲಿ ಮಣಿಪುರದಲ್ಲಿ ನಡೆದ ಅಮಾನವೀಯ ಘಟನೆಯ ವಿಡಿಯೋ ವೈರಲ್​ ಆಗಿತ್ತು. ಅದರಲ್ಲಿ ಪುರುಷರ ಗುಂಪೊಂದು ಮಹಿಳೆಯರಿಬ್ಬರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿತ್ತು. ಅಲ್ಲದೆ, ಮಹಿಳೆಯರ ಮೇಲೆ ಗ್ಯಾಂಗ್​ರೇಪ್​ ಸಹ ನಡೆದಿದೆ ಎನ್ನಲಾಗಿದೆ. ಈ ಘಟನೆ ಮೇ 4ರಂದು ಮಣಿಪುರ ರಾಜಧಾನಿ ಇಂಫಾಲ್​ನಿಂದ 35 ಕಿ.ಮೀ. ದೂರದಲ್ಲಿರುವ ಕೊಂಗ್​ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿತು. ಇದು ದೇಶಾದ್ಯಂತ ಆಕ್ರೋಶ ಕಿಚ್ಚು ಹೆಚ್ಚಿಸಿತು. ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತೀಸ್​ ಸಮುದಾಯ ಇಟ್ಟಿರುವ ಬೇಡಿಕೆಯ ಕುರಿತು ಮಣಿಪುರದ ಮೈತೀಸ್​ ಮತ್ತು ಕುಕಿ ಬುಡಕಟ್ಟುಗಳ ನಡುವೆ ಘರ್ಷಣೆಗಳು ಉಂಟಾಗಿರುವ ನಡುವೆಯೇ ಈ ಭಯಾನಕ ಘಟನೆಯೂ ನಡೆದಿದೆ. ಇದೇ ವಿಚಾರಕ್ಕೆ ಮಣಿಪುರ ರಾಜ್ಯ ಅನೇಕ ಸಂಘರ್ಷಗಳಿಗೆ ಕಾರಣವಾಗಿದ್ದು, ಅಲ್ಲಿನ ಪರಿಸ್ಥಿತಿ ಈಗಲೂ ಬೂದಿ ಮುಚ್ಚಿದ ಕೆಂಡದಂತೆ ಇದೆ. ಮಣಿಪುರದ ಹಿಂಸಾಚಾರದಲ್ಲಿ ಈವರೆಗೂ 150 ಮಂದಿ ಅಸುನೀಗಿದ್ದು, ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಿದ್ದು, ಪರಿಹಾರ ಶಿಬಿರಗಳಲ್ಲಿ ಆಶ್ರಯವನ್ನು ಪಡೆದಿದ್ದಾರೆ.(ಏಜೆನ್ಸೀಸ್​)
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಎಚ್ಚರಿಕೆ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ಟ್ವಿಟರ್​ ವಿರುದ್ಧ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ: ದೇಶವೇ ತಲೆತಗ್ಗಿಸುವಂತಹ ಘಟನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eight =
Remember me
