ದೆಹಲಿ:ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಕುಕಿ ಸಮುದಾಯದವರು ಕೇಂದ್ರ ಗೃಹಸಚಿವ ಅಮಿತ್ ಶಾ ನಿವಾಸದ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಎಲ್​ಆಂಡ್​ಟಿ ಕಂಪನಿಗೆ ನೀರು ಪೂರೈಕೆ ರದ್ದು, ಸರ್ಕಾರದ ಗಮನಕ್ಕೆ: ದೀಪಾ ಚೋಳನ್
ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಕುಕಿ ಸಮುದಾಯದವರು ಫಲಕಗಳನ್ನು ಪ್ರದರ್ಶಿಸಿ, ಪ್ರತಿಭಟನೆ ನಡೆಸಿದರು. ಕುಕಿಗಳ ಜೀವವನ್ನು ರಕ್ಷಿಸಿ ಎಂಬ ಸಂದೇಶಗಳಿರುವ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.ತದನಂತರ, ಗೃಹ ಸಚಿವರ ಜತೆಗಿನ ಮಾತುಕತೆ ನಾಲ್ವರು ಪ್ರತಿಭಟನಾಕಾರರಿಗೆ ಅವಕಾಶ ನೀಡಿ, ಉಳಿದ ಪ್ರತಿಭಟನಾಕಾರರನ್ನು ಜಂತರ್​ ಮಂತರ್‌ಗೆ ಸ್ಥಳಾಂತರಿಸಲಾಯಿತು.
ಮಣಿಪುರದಲ್ಲಿ ಮೇ 3ರಂದು ಮೊದಲ ಬಾರಿಗೆ ಸಂಘರ್ಷಣೆಗಳು ಪ್ರಾರಂಭವಾದವು. ಒಂದು ತಿಂಗಳ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 98 ಜನರು ಮೃತಪಟ್ಟಿದ್ದು, ಕನಿಷ್ಠ 310 ಜನರು ಗಾಯಗೊಂಡಿದ್ದಾರೆ. ರಾಜ್ಯದ 272 ಪರಿಹಾರ ಶಿಬಿರಗಳಲ್ಲಿ ಒಟ್ಟು 37,450 ಜನರು ಆಶ್ರಯ ಪಡೆದಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
