ನವದೆಹಲಿ:ಜನಾಂಗೀಯ ಹಿಂಸಾಚಾರದಿಂದ ತತ್ತರಿಸುವ ಮಣಿಪುರದಲ್ಲಿ ಶಾಂತಿ ಮರು ಸ್ಥಾಪನೆಗಾಗಿ ಅಲ್ಲಿನ ಸರ್ಕಾರ, ಸ್ಥಳೀಯ ಆಡಳಿತ ಹಾಗೂ ಈಶಾನ್ಯ ರಾಜ್ಯದ ಜನರು ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್ಎಸ್​) ಒತ್ತಾಯಿಸಿದೆ. ವಿಶ್ವಾಸದ ಕೊರತೆ ನೀಗಿಸುವ ಹಾಗೂ ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶವನ್ನೇ ಪ್ರಧಾನವಾಗಿ ಇರಿಸಿಕೊಂಡು ಕ್ರಮಕೈಗೊಳ್ಳಬೇಕು ಎಂದು ಆರ್​​ಎಸ್​ಎಸ್​ ಆಗ್ರಹಿಸಿದೆ.
ಇದನ್ನೂ ಓದಿ:ಹೆಂಡ್ತಿ ಆ್ಯಪ್ ಡೌನ್​ಲೋಡ್ ಮಾಡೋದು ತಡವಾಯ್ತೆಂದು ಸಿಟ್ಟಾದ ಗಂಡ; ಸಮಾಧಾನಿಸಲು ಬಂದ ಮಗನ ಎದೆಗೆ ಚೂರಿ ಇರಿತ!
ಈ ನಿಟ್ಟಿನಲ್ಲಿ ಆರ್​ಎಸ್ಎಸ್​ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಹೆಸರಿನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಮೇ 3ರಂದು ಲಾಲ್ ಹರೋಬಾ ಹಬ್ಬದ ಸಮಯದಲ್ಲಿ ಚುರಾಚಂದ್ಪುರದಲ್ಲಿ ಆಯೋಜಿಸಲಾದ ಪ್ರತಿಭಟನಾ ರ್ಯಾಲಿ ನಂತರ ಮಣಿಪುರದಲ್ಲಿ ಪ್ರಾರಂಭವಾದ ಹಿಂಸಾಚಾರ ಮತ್ತು ಅನಿಶ್ಚಿತತೆ ಖಂಡನೀಯ. ಮಣಿಪುರದಲ್ಲಿ ಕಳೆದ 45 ದಿನಗಳಿಂದ ನಡೆಯುತ್ತಿರುವ ನಿರಂತರ ಹಿಂಸಾಚಾರ ಅತ್ಯಂತ ಆತಂಕಕಾರಿ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಮೊದಲ ಗ್ಯಾರಂಟಿಗೀಗ ಧಾರ್ಮಿಕ ‘ಶಕ್ತಿ’; ಬಿಜೆಪಿ ವಿರುದ್ಧ ಕಾಂಗ್ರೆಸ್ ಧರ್ಮಾಸ್ತ್ರ!
ಶತಮಾನಗಳಿಂದ ಪರಸ್ಪರ ಸಾಮರಸ್ಯ ಮತ್ತು ಸಹಕಾರದೊಂದಿಗೆ ಶಾಂತಿಯುತ ಜೀವನವನ್ನು ನಡೆಸುತ್ತಿರುವವರ ಮಧ್ಯೆ ಭುಗಿಲೆದ್ದ ಅಶಾಂತಿ ಮತ್ತು ಹಿಂಸಾಚಾರವು ಇನ್ನೂ ನಿಂತಿಲ್ಲ ಎಂಬುದು ತುಂಬಾ ದುರದೃಷ್ಟಕರ. ಯಾವುದೇ ಸಮಸ್ಯೆಗೆ “ಪರಸ್ಪರ ಚರ್ಚೆಗಳ” ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಹೊಸಬಾಳೆ ಅವರು, ಹಿಂಸಾಚಾರದಿಂದ ಸ್ಥಾನಪಲ್ಲಟಗೊಂಡ ಜನರೊಂದಿಗೆ ಆರ್​ಎಸ್ಎಸ್​ ಇರುತ್ತದೆ ಎಂದು ತಿಳಿಸಿದ್ದಾರೆ.
‘ನನ್ನಪ್ಪ ಒಬ್ಬ ಬೆಪ್ಪ.. ನಾನೂ ಬೆಪ್ಪ..’: ಆತ್ಮಾವಲೋಕನ ರೀತಿಯಲ್ಲಿ ಹ್ಯಾಪಿ ಫಾದರ್ಸ್ ಡೇ ವಿಷ್ ಮಾಡಿದ ನಟ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seventeen =
Remember me
