ಇಂಫಾಲ್​:ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಗುರುವಾರ ರಾತ್ರಿ ಇಂಫಾಲ್‌ನಲ್ಲಿರುವ ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್​​ ನಿವಾಸಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.ಮಣಿಪುರದಲ್ಲಿ ದಿನದಿಂದ ದಿನಕ್ಕೆ ಹಿಂಸಾಚಾರ ಹೆಚ್ಚಾಗುತ್ತಿದ್ದು, ಮೈತೆಯಿ ಮತ್ತು ಕುಕಿ ಸಮುದಾಯಗಳ ಜನಾಂಗೀಯ ಘರ್ಷಣೆಯಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಅಶಾಂತಿ ತಲೆದೋರಿದೆ. ನಿಷೇಧದ ನಡುವೆಯೂ ಗುರುವಾರ ರಾತ್ರಿ ಕೇಂದ್ರ ಸಚಿವರ ಮನೆ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿತ್ತು.ಇದನ್ನೂಓದಿ:ಕರ್ನಾಟಕದಲ್ಲಿ ಮೂರು ದಿನ ಮಳೆ ಮುಂದುವರಿಕೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಸಿದ ಹವಾಮಾನ ಇಲಾಖೆ…ಘಟನೆಯ ವೇಳೆ ಸಚಿವರ ನಿವಾಸದಲ್ಲಿ ಒಂಬತ್ತು ಭದ್ರತಾ ಸಿಬ್ಬಂದಿ, ಐವರು ಭದ್ರತಾ ಸಿಬ್ಬಂದಿ ಮತ್ತು ಎಂಟು ಹೆಚ್ಚುವರಿ ಗಾರ್ಡ್‌ಗಳು ಕರ್ತವ್ಯದಲ್ಲಿದ್ದರು. ದಾಳಿಯ ವೇಳೆ ಎಲ್ಲಾ ದಿಕ್ಕುಗಳಿಂದ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಸಚಿವರ ಮನೆಯ ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವರು, ನಾನು ಕೆಲಸದ ನಿಮಿತ್ತವಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ರಾತ್ರಿ ನಡೆದ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಹಿಂಸೆ ಯಾವುದೇ ಕಾರಣಕ್ಕೂ ಸಹಾಯ ಮಾಡುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿರುವವರು ಮಾನವೀಯತೆಯ ಶತ್ರುಗಳು ಎಂಬುದನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.ಈ ಹಿಂದೆ ಈಶಾನ್ಯ ರಾಜ್ಯದ ಏಕೈಕ ಮಹಿಳಾ ಸಚಿವೆ ನೆಮ್ಚಾ ಕಿಪ್‌ಗೆನ್​ರ ನಿವಾಸಕ್ಕೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
