ನವದೆಹಲಿ:ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬತರಾಗಿದ್ದಾರೆ. ಅವರು ಇಂದು ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಕೋರಿ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ದೆಹಲಿ ಸಚಿವ ಸಂಪುಟ ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿಸೋಡಿಯಾ ಅವರನ್ನು ಶನಿವಾರ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿತ್ತು.  ಜಾಮೀನು ಅರ್ಜಿ ವಿಚಾರಣೆ ತನ್ನಲ್ಲಿ ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಪರ್ಯಾಯ ಪರಿಹಾರಗಳಿಗಾಗಿ ಹೈಕೋರ್ಟ್ ಅನ್ನು ಸಂಪರ್ಕಿಸಲು ಸೂಚಿಸಿದ ನಂತರ ಈ ಬೆಳವಣಿಗೆಯಾಗಿದೆ. ಜಾಮೀನು ವಿಚಾರಣೆ ಶನಿವಾರ ನಡೆಯಲಿದೆ.
ಇದನ್ನೂ ಓದಿ:ಪತಿಯ ಗುಪ್ತಾಂಗವನ್ನು ಕೊಡಲಿಯಿಂದ ಕತ್ತರಿಸಿ ಮುಗಿಸಿದ 5ನೇ ಹೆಂಡತಿ ಅರೆಸ್ಟ್
ದೆಹಲಿ ಮಧ್ಯ ನೀತಿಯಲ್ಲಿನ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ಉಪಮುಖ್ಯಮಂತ್ರಿ ಅವರು ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಮತ್ತು ಅವರು ಕೇಳಿದ ಸ್ಪಷ್ಟನೆಗಳನ್ನು ತಪ್ಪಿಸಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + seven =
Remember me
