ನವದೆಹಲಿ:2021-22ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ನವೆಂಬರ್ 22ರವರೆಗೆ ವಿಸ್ತರಿಸಿ ಆದೇಶಿಸಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖೆ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಎಎಪಿ ನಾಯಕ ಸಂಜಯ್​ ಸಿಂಗ್​ ಹಾಗೂ ಅವರ ಆಪ್ತರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿವೆ.
ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ವಕೀಲರು ದಾಖಲೆಗಳು ಸರಿಯಾಗಿಲ್ಲದ ಕಾರಣ ಅವುಗಳನ್ನು ಪರಿಶೀಲಿಸಲು ಸವಾಲುಗಳನ್ನು ಎದುರಿಸುತ್ತಿದ್ದಾರೆ.
Delhi Excise Policy: Court extends judicial custody of Manish Sisodia, directs counsels to inspect documents at CBI officeRead@ANIStory |https://t.co/4osjYt8nmi#Manishsisodia#delhiexcisepolicycase#CBIpic.twitter.com/luZcXwl865
ಇದನ್ನೂ ಓದಿ:ಲೈಂಗಿಕ ಕಿರುಕುಳ ಪ್ರಕರಣ; ಗುಣತಿಲಕೆ ಮೇಲಿನ ನಿಷೇಧವನ್ನು ಹಿಂಪಡೆದ ಶ್ರೀಲಂಕಾ ಕ್ರಿಕೆಟ್
2022ರ ಜುಲೈ 22ರಂದು, ಎಲ್‌ಜಿ ವಿಕೆ ಸಕ್ಸೇನಾ ಅವರು ಹೊಸ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಆಪಾದಿತ ನಿಯಮ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು. ಆಮ್ ಆದ್ಮಿ ಪಕ್ಷದ (ಎಎಪಿ) ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 9 =
Remember me
