ನವದೆಹಲಿ:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಏಳನೇ ಹಂತದ ಮತದಾನ ಹಾಗೂ ಚುನಾವಣಾ ಫಲಿತಾಂಶಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಯಾವ ಪ್ರಧಾನಿಯೂ ಇಷ್ಟೊಂದು ದ್ವೇಷಪೂರಿತ ಭಾಷಣವನ್ನು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಪತ್ರ ಒಂದನ್ನು ಬರೆದಿರುವ ಅವರು, ಸಾರ್ವಜನಿಕ ಭಾಷಣದ ಘನತೆಯನ್ನು ಪ್ರಧಾನಿ ನರೇಂದ್ರ ಮೋದಿ ಹಾಳು ಮಾಡಿದ್ದು, ಸಮಜಾದ ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿ ದ್ವೇಷಪೂರಿತ ಭಾಷಣವನ್ನು ಮಾಡಲಾಗುತ್ತಿದೆ. ಅವರ ಇದು ದೇಶವನ್ನು ಸಂಪೂರ್ಣವಾಗಿ ವಿಭಜಿಸುವ ಹೇಳಿಕೆಯಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಭಾರತ-ಪಾಕ್​​ ಪಂದ್ಯಕ್ಕೆ ಉಗ್ರರ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು
ಹಾಲಿ ಚುನಾವಣೆಯ ಸಮಯದಲ್ಲಿ ನಾನು ಪ್ರಧಾನಿ ಮೋದಿ ಅವರು ಮಾಡುತ್ತಿರುವ ಭಾಷಣವನ್ನು ಗಮನಿಸುತ್ತಿದ್ದೇನೆ. ಮೋದಿಯವರು ನಿರಂತರವಾಗಿ ದ್ವೇಷಭಾಷಣಗಳನ್ನು ಮಾಡುತ್ತಿದ್ದು, ದೇಶವನ್ನು ವಿಭಜಿಸುವ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಮೋದಿ ಈ ಮೂಲಕ ಪ್ರಧಾನಿ ಕಚೇರಿಯ ಘನತೆಯನ್ನು ಕಡಿಮೆ ಮಾಡಲು ಯತ್ನಿಸುತ್ತಿದ್ದಾರೆ.
ನಾನು ನೋಡಿದಂತೆ ಯಾವ ಪ್ರಧಾನಿಯು ಇಷ್ಟೊಂದು ದ್ವೇಷ ಭಾಷಣವನ್ನು ಮಾಡಿಲ್ಲ. ಅವರು ನನ್ನ ವಿರುದ್ಧ ಕೆಲವು ಸುಳ್ಳು ಹೇಳಿಕೆಗಳನ್ನು ಸಹ ನೀಡಿದ್ದಾರೆ. ನಾನು ನನ್ನ ಜೀವನದಲ್ಲಿ ಒಂದು ಸಮುದಾಯದಿಂದ ಇನ್ನೊಂದು ಸಮುದಾಯವನ್ನು ಪ್ರತ್ಯೇಕಿಸಿಲ್ಲ. ಆದರೆ, ಬಿಜೆಪಿ ಆ ಕೆಲಸವನ್ನು ಮಾಡುತ್ತಿದೆ. ಬಿಜೆಪಿಯು ಅಗ್ನಿವೀರ್ ಯೋಜನೆಯನ್ನು ಸಶಸ್ತ್ರ ಪಡೆಗಳ ಮೇಲೆ ಹೇರುತ್ತಿದೆ. ಬಿಜೆಪಿ ದೇಶಭಕ್ತಿ, ಶೌರ್ಯ ಮತ್ತು ಸೇವೆಯನ್ನು ಕೇವಲ 4 ವರ್ಷಗಳಿಗೆ ಸೀಮಿತಗೊಳಿಸುವ ಮೂಲಕ ದುರ್ಬಲಗೊಳಿಸುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 11 =
Remember me
