ನವದೆಹಲಿ :ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರಿಗೆ ಇಂದು ಕರೊನಾ ಪಾಸಿಟೀವ್ ಬಂದಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಸಿಂಗ್​​ರ ಪರಿಸ್ಥಿತಿಯನ್ನು ತಜ್ಞರ ತಂಡ ಮೇಲ್ವಿಚಾರಣೆ ಮಾಡುತ್ತಿದ್ದು, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಮನಮೋಹನ್​ ಸಿಂಗ್ ಅವರು ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ನಿನ್ನೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೊನಾ ಪರಿಸ್ಥಿತಿಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ ಪತ್ರ ಬರೆದಿದ್ದ ಸಿಂಗ್, ಲಸಿಕೆಯ ಸಮರ್ಪಕ ಬಳಕೆಗೆ ಸಲಹೆಗಳನ್ನು ನೀಡಿದ್ದರು.
2009 ರಲ್ಲಿ ಎರಡನೇ ಬಾರಿ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಿಂಗ್​ ಅವರನ್ನು, ಕಳೆದ ವರ್ಷ ಮೇ ತಿಂಗಳಲ್ಲಿ ಸಹ ಎದೆನೋವು ಉಂಟಾದ ಹಿನ್ನೆಲೆಯಲ್ಲಿ ಏಮ್ಸ್​ ಆಸ್ಪತ್ರೆಗೆ ಸೇರಿಸಲಾಗಿತ್ತು ಎನ್ನಲಾಗಿದೆ.(ಏಜೆನ್ಸೀಸ್)
“ಕರೊನಾ ಲಸಿಕೆ ಬಗ್ಗೆ ಹಿಂಜರಿಕೆ ಹುಟ್ಟಿಸಿದ್ದೇ ಕಾಂಗ್ರೆಸ್! ಜನರ ಜೀವದೊಂದಿಗೆ ಆಟಾಡಿತು” ಎಂದ ಆರೋಗ್ಯ ಸಚಿವ

ಇಂಗ್ಲೆಂಡ್ ಪ್ರಧಾನಿ ಭಾರತ ಪ್ರವಾಸ ರದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
