ಭೋಪಾಲ್​:ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಮೆರವಣಿಗೆ ವೇಳೆ ಉದ್ದೇಶಪೂರ್ವಕವಾಗಿ ಶಾಂತಿ ಸೌಹಾರ್ದತೆಗೆ ಧಕ್ಕೆ ತಂದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಮೂವರ ಮನೆಯನ್ನು ಜಿಲ್ಲಾಡಳಿತದ ನೇತೃತ್ವದಲ್ಲಿ ಹೊಡೆದು ಹಾಕಲಾಗಿದೆ.
ಸೋಮವಾರ ಉಜ್ಜಯಿನಿಯಲ್ಲಿ ನಡೆದ ಮಹಾಕಾಲ್​ ಕಿ ಸವಾರಿ ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಮೂವರು ಉದ್ದೇಶಪೂರ್ವಕವಾಗಿ ತಮ್ಮ ಮನೆಯ ಟೆರೇಸ್​ ಮೇಲಿಂದ ಭಕ್ತಾದಿಗಳ ಮೇಲೆ ಉಗುಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ವಿಡಿಯೋ ವೈರಲ್​ ಆದ ಬೆನ್ನಲ್ಲೇ ,ಮುಂಜಾಗ್ರತ ಕ್ರಮವಾಗಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಈ ಪೈಕಿ ಓರ್ವ ಅಪ್ರಾಪ್ತ ವಯಸ್ಕನಾಗಿದ್ದಾನೆ. ಬಂಧಿತರ ಮೆನಯನ್ನು ಕೆಡವಿರುವ ಮಧ್ಯಪ್ರದೇಶ ಸರ್ಕಾರ ಡಿಜೆ ಹಾಗೂ ಡ್ರಮ್ಸ್​ಗಳ ಸದ್ದಿನೊಂದಿಗೆ ಕಾರ್ಯಾಚರಣೆ ನಡೆಸುತ್ತಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.
#MadhyaPradeshएक तरफ ढोल नगाड़े बज रहे हैं, दूसरी तरफ किसी का घर गिराया जा रहा है।मामला#Ujjainका है, 3 लोगों को कथित तौर पर#mahakalकी सवारी निकालते वक्त थूकने के आरोप में गिरफ्तार किया गया है।@QuintHindi@TheQuintpic.twitter.com/o7A9r2x23F
ಇದನ್ನೂ ಓದಿ:ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರದಿಂದ ಶಿಫಾರಸು
ಈ ಕುರಿತು ಪ್ರತಿಕ್ರಿಯಿಸಿರುವ ಉಜ್ಜಯಿನಿ ಜಿಲ್ಲಾ ಪೊಲೀಸ್​ ಉಪ ವರಿಷ್ಠಾಧಿಕಾರಿ ಆಕಾಶ್​ ಭುರಿಯಾ ಧಾರ್ಮಿಕ ಕಾರ್ಯಕ್ರಮ ನಡೆಯುವ ವೇಳೆ ಕೆಲವರು ಶಾಂತಿ-ಸಾಹಾರ್ದತೆಗೆ ಧಕ್ಕೆ ತರಲು ಯತ್ನಿಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ FIR ದಾಖಲಿಸಲಾಗಿದ್ದು, ನಗರಸಭೆ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದೇವೆ.
ನಗರಸಭೆ ಹಾಗೂ ಕಂದಾಯ ಇಲಾಖೆಯ ನೇತೃತ್ವದಲ್ಲಿ ಆರೋಪಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದ್ದ ಜಾಗವನ್ನು ಬಿಗಿ ಭದ್ರತೆಯಲ್ಲಿ ಹೊಡೆದು ಹಾಕಲಾಗಿದೆ. ಡ್ರಮ್​ ಹಾಗೂ ಡಿಜೆಯನ್ನು ಸಾರ್ವಜನಿಕರಿಗೆ ಅತಿಕ್ರಮಣ ತೆರವು ಕಾರ್ಯಾಚರಣೆ ಮಾಡುತ್ತಿರುವುದಾಗಿ ತಿಳಿಸಲು ಉಪಯೋಗಿಸಲಾಯಿತು ಎಂದು ಉಜ್ಜಯಿನಿ ಜಿಲ್ಲಾ ಪೊಲೀಸ್​ ಉಪ ವರಿಷ್ಠಾಧಿಕಾರಿ ಆಕಾಶ್​ ಭುರಿಯಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
