ಅಯೋಧ್ಯೆ:ಜಗತ್ತಿನಾದ್ಯಂತ ಎಲ್ಲರ ಚಿತ್ತ ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಉದ್ಘಾಟನೆಯತ್ತ ಮೂಡಿದೆ. ಈ ಸಂದರ್ಭದಲ್ಲಿ ದೇಶ-ವಿದೇಶಗಳಿಂದ ಬರುವ ಸಹಸ್ರಾರು ಸಂಖ್ಯೆಯ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಉತ್ತರಪ್ರದೇಶ ಸರ್ಕಾರ, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲು ಹೆಚ್ಚು ಗಮನಹರಿಸಿದೆ.
ಇದನ್ನೂ ಓದಿ:ಇಂದಿನಿಂದ ಇಂಡಿಯನ್ ಓಪನ್ ಬ್ಯಾಡ್ಮಿಂಟನ್: ಸಾತ್ವಿಕ್-ಚಿರಾಗ್ ಶೆಟ್ಟಿ ತವರಿನಲ್ಲಿ ಫೇವರಿಟ್
ಜನವರಿ 22ರಂದು ಆಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾಗಲಿದೆ ಎಂಬ ಸುದ್ದಿ ಕೇಳುತ್ತಿದ್ದಂತೆ ಅದೆಷ್ಟೋ ಜನರು, ಆ ದಿನವನ್ನು ಬಹಳ ವಿಶೇಷವಾಗಿ ಪರಿಗಣಿಸಿದ್ದು, ತಮ್ಮ ಹಲವು ಕೆಲಸಗಳಿಗೆ ಅಂದೇ ಹೊಸ ಆರಂಭ ಕೊಡಲು ಯೋಜಿಸಿದ್ದಾರೆ. ಇದೆಲ್ಲದರ ನಡುವೆ ಮಗುವಿನ ನಿರೀಕ್ಷೆಯಲ್ಲಿರುವ ಗರ್ಭೀಣಿಯರು ಕೂಡ ಇದೇ ರೀತಿ ಚಿಂತಿಸಿದ್ದು, ರಾಮಮಂದಿರ ಉದ್ಘಾಟನೆ ದಿನದಂದೇ ನಮಗೆ ಮಗು ಜನಿಸಬೇಕು ಎಂದು ವೈದ್ಯರ ಬಳಿ ತಮ್ಮ ಬಯಕೆ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ದಿನದಂದೇ ನಮಗೆ ಮಗು ಜನಿಸಬೇಕು ಎಂದ ಗರ್ಭಿಣಿಯರು, ತಮ್ಮ ಹೆರಿಗೆ ಅಂದೇ ಆಗಬೇಕು ಎಂದು ವೈದ್ಯರನ್ನು ಒತ್ತಾಯಿಸಿದ್ದಾರೆ. ಈ ರೀತಿಯ ಘಟನೆಗಳು ಹೆಚ್ಚಾಗಿ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕೇಳಿಬಂದಿದೆ. ಇನ್ನು ಈ ಬಗ್ಗೆ ಮಾತನಾಡಿದ ಪ್ರಭಾರ ವೈದ್ಯಾಧಿಕಾರಿ ಡಾ.ವೀರೇಂದ್ರ ರಾಜ್‌ಗಿರ್ ಹೇಳಿದ ಸಂಗತಿ ಹೀಗಿದೆ.
ಇದನ್ನೂ ಓದಿ:ಆಫ್ಘನ್​ ವಿರುದ್ಧ ಕೊನೇ ಟಿ20 ಪಂದ್ಯಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಟೀಮ್​ ಇಂಡಿಯಾ
“ಸುಮಾರು 60 ಗರ್ಭಿಣಿಯರು ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಹೊಂದಿಕೆಯಾಗುವಂತೆ ತಮ್ಮ ಹೆರಿಗೆಯನ್ನು ಮಾಡುವಂತೆ ನಮ್ಮಲ್ಲಿ ಮನವಿ ಮಾಡಿದ್ದಾರೆ. ಆದ್ರೆ ತಾಯಿ ಮತ್ತು ಮಗುವಿನ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಡೆಲಿವರಿ ಮಾಡಿಸುವ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು” ಎಂದು ರಾಜ್‌ಗಿರ್ ಹೇಳಿದ್ದಾರೆ,(ಏಜೆನ್ಸೀಸ್).
ನಿತ್ಯಭವಿಷ್ಯ: ಈ ರಾಶಿಯವರಿಗಿಂದು ನೀರಿನಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯ ನಡವಳಿಕೆಯಿಂದ ಕೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 2 =
Remember me
