ರಾಣಿಪುರ:ಪ್ರಿಯತಮೆಯನ್ನು ಹತ್ಯೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಉತ್ತರಾಖಂಡ್​​ನ ರಾಣಿಪುರ ಎಂಬಲ್ಲಿ ನಡೆದಿದೆ.
ಇದನ್ನೂ ಓದಿ:ಮಹಿಳೆ ಮೃತಪಟ್ಟ 10 ವರ್ಷದ ಬಳಿಕ 7 ಕೋಟಿ ರೂ. ತೆರಿಗೆ ಕಟ್ಟುವಂತೆ ನೋಟಿಸ್‌: ಕುಟುಂಬಸ್ಥರು ಶಾಕ್​..!ಘಟನೆಗೆ ಸಂಬಂಧಿಸಿದಂತೆ ಪುನೀತ್​ ಎಂಬ ಆರೋಪಿಯನ್ನು ಬಂಧಿಸಲಾಗಿದ್ದು, ಆರು ದಿನಗಳ ಹಿಂದೆ ರಸ್ತೆ ಬದಿಯ ಪೊದೆಗಳಲ್ಲಿ ಮಹಿಳೆಯೊಬ್ಬಳ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ. ತನಿಖೆಯ ವೇಳೆ ಶವ ಯುವತಿಯದ್ದು ಎಂದು ತಿಳಿದುಬಂದಿದ್ದು, ಆಕೆಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ಹಿನ್ನೆಲೆ:ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಧಾಂಪುರ್ ನಿವಾಸಿಯಾಗಿರುವ ಆರೋಪಿ ಪುನೀತ್ ಆಕೆಯ ಪ್ರೇಯಸಿ ನಡುವೆ ಹಲವು ವರ್ಷಗಳಿಂದ ಸಂಬಂಧವಿದ್ದು, ಬೇರೆ ಬೇರೆ ಜಾತಿಗೆ ಸೇರಿದವರಾಗಿರುವುದರಿಂದ ಅವರ ಮದುವೆಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಏತನ್ಮಧ್ಯೆ, ಈ ವರ್ಷದ ಫೆಬ್ರವರಿಯಲ್ಲಿ ಪುನೀತ್ ಬೇರೆ ಮಹಿಳೆಯೊಂದಿಗೆ ವಿವಾಹವಾಗಿದ್ದನು.ಇದನ್ನೂ ಓದಿ:ಒಟಿಟಿಯಲ್ಲಿ ಹೆಚ್ಚುತ್ತಿರುವ ಧೂಮಪಾನ ದೃಶ್ಯಗಳು: ಕೂಡಲೇ ಕತ್ತರಿ ಹಾಕಬೇಕೆಂದು ಒತ್ತಾಯಆಗ ಮೃತ ಮಹಿಳೆಯು ಕೂಡ ಬೇರೆ ಯುವಕನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಷಯದ ಬಗ್ಗೆ ಸುದ್ದಿ ತಿಳಿದ ಆರೋಪಿಯು ಮದುವೆಯ ನಂತರವೂ ತನ್ನ ಜತೆ ಸಂಬಂಧ ಉಳಿಸಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಮೊಬೈಲ್ ನಂಬರ್ ಬದಲಾಯಿಸಿದ್ದಾಳೆ. ಇದರಿಂದ ಕೋಪಗೊಂಡಿದ್ದ ಆರೋಪಿಯು, ಯಾವುದೋ ನೆಪದಲ್ಲಿ ಆಕೆಯನ್ನು ಭೇಟಿಯಾಗಲು ಕರೆದು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಬಳಿಕ ಆಕೆಯ ಕೊಲೆ ಮಾಡಿ ಶವವನ್ನು ಪೊದೆಗೆ ಎಸೆದು ಪರಾರಿಯಾಗಿದ್ದಾನೆ.ಈ ಕುರಿತು ಮಾತನಾಡಿರುವ ಪೊಲೀಸರು, ಜುಲೈ 26 ರಂದು ತಿಬ್ರಿಯ ರಸ್ತೆ ಬದಿಯ ಪೊದೆಗಳಲ್ಲಿ ಕೊಳೆತ ಶವ ಮತ್ತು ಕೆಲವು ಬಟ್ಟೆಗಳನ್ನು ಪತ್ತೆ ಹಚ್ಚಿದ್ದರು. ತನಿಖೆಯ ವೇಳೆ ಶವ ಯುವತಿಯದ್ದು ಎಂದು ತಿಳಿದುಬಂದಿದ್ದು, ಆಕೆಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ, ಒಬ್ಬ ವ್ಯಕ್ತಿ ತನ್ನ ಮಗಳು ನಾಪತ್ತೆಯಾಗಿರುವ ಬಗ್ಗೆ SIDCUL ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ ಎಂದು ಅಧಿಕಾರಿಗಳು ಹೇಳಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
