ನವದೆಹಲಿ:ವಿವಾಹಿತ ಭಾರತೀಯ ಮಹಿಳೆಯೊಬ್ಬರು ಫೇಸ್‌ಬುಕ್‌ನಲ್ಲಿ ಪರಿಚಿತನಾದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
34 ವರ್ಷದ ಅಂಜು ಉತ್ತರ ಪ್ರದೇಶದ ಕೈಲೋರ್ ಗ್ರಾಮದ ಮೂಲದವರಾಗಿದ್ದು, ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಪತಿಯೊಂದಿಗೆ ವಾಸಿಸುತ್ತಿದ್ದರು. ಆಕೆ ತನ್ನ 29 ವರ್ಷದ ಪಾಕಿಸ್ತಾನಿ ಸ್ನೇಹಿತ, ನಸ್ರುಲ್ಲಾನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಅಪ್ಪರ್ ದಿರ್ ಜಿಲ್ಲೆಗೆ ತೆರಳಿದ್ದಾರೆ.
ಇದನ್ನೂ ಓದಿ:ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಬೇಡಿ; ಪ್ರಧಾನಿ ಮತ್ತು ಯುಪಿ ಸಿಎಂಗೆ ಸೀಮಾ ಹೈದರ್ ಮನವಿ
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸ್ನೇಹಿತರಾದರು ಎಂದು ARY ನ್ಯೂಸ್ ವರದಿ ಮಾಡಿದೆ.
ಅಂಜು ಒಂದು ತಿಂಗಳಿನಿಂದ ಪಾಕಿಸ್ತಾನದಲ್ಲಿದ್ದು, ಅವರನ್ನು ಮದುವೆಯಾಗಲು ಇಲ್ಲಿಗೆ ಬಂದಿಲ್ಲ, ಭಾರತೀಯ ಮಹಿಳೆ ಆರಂಭದಲ್ಲಿ ಪೊಲೀಸರ ವಶದಲ್ಲಿದ್ದರು ಆದರೆ ಅವರ ಪ್ರಯಾಣ ದಾಖಲೆಗಳನ್ನು ಜಿಲ್ಲಾ ಪೊಲೀಸರು ಪರಿಶೀಲಿಸಿದ ನಂತರ ಬಿಡುಗಡೆ ಮಾಡಿದರು.
ಇದನ್ನೂ ಓದಿ:ಪಾಕಿಸ್ತಾನದ ವೈರಲ್ ಚಾಯ್‍ವಾಲಾ ಈಗ ಲಂಡನ್‍ನಲ್ಲಿ ಮಾಡೋ ಕೆಲಸ ಏನು?
“ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಗೆ ಹೋಗಲು ಅನುಮತಿ ನೀಡಲಾಯಿತು. ಪಾಕಿಸ್ತಾನಕ್ಕೆ ಕೆಟ್ಟ ಹೆಸರು ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಅವರಿಗೆ ಭದ್ರತೆಯನ್ನು ಒದಗಿಸಲಾಗಿದೆ” ಎಂದು ಮೂಲವೊಂದು ಪಿಟಿಐಗೆ ತಿಳಿಸಿದೆ.
ಹಿರಿಯ ಪೊಲೀಸ್ ಅಧಿಕಾರಿ ಮುಷ್ತಾಕ್ ಖಾಬ್ ಮತ್ತು ಸ್ಕೌಟ್ಸ್ ಮೇಜರ್ ಅವರ ದಾಖಲೆಗಳನ್ನು ತೆರವುಗೊಳಿಸಿದ ನಂತರ ಅಂಜು ಮತ್ತು ಆಕೆಯ ಸ್ನೇಹಿತನನ್ನು ಬಿಡುಗಡೆ ಮಾಡಲಾಗಿದೆ ಎಂದು ದಿರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಧ್ಯಮ ವರದಿಗಳ ನಂತರ ರಾಜಸ್ಥಾನ ಪೊಲೀಸರ ತಂಡವು ಅಂಜು ಅವರ ಬಗ್ಗೆ ವಿಚಾರಿಸಲು ಭಿವಾಡಿಯ ಮನೆಗೆ ತಲುಪಿದೆ.
ಇದನ್ನೂ ಓದಿ:ಹಳೆ ಚಾಳಿ ಮುಂದುವರೆಸಿದ ಪಾಕಿಸ್ತಾನ; ಭಾರತ ಏಷ್ಯಾ ಕಪ್​ನಲ್ಲಿ ಭಾಗವಹಿಸಲು ಬರದಿದ್ರೆ….
ಜೈಪುರಕ್ಕೆ ಹೋಗುವ ನೆಪದಲ್ಲಿ ಗುರುವಾರ ಮನೆಯಿಂದ ಹೊರಟು ಹೋಗಿದ್ದಳು. ಆದರೆ ಆಕೆ ಪಾಕಿಸ್ತಾನದಲ್ಲಿದ್ದಾಳೆ ಎಂದು ಮನೆಯವರಿಗೆ ನಂತರ ತಿಳಿಯಿತು ಎಂದು ಆಕೆಯ ಪತಿ ಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ.
“ಅವಳು ತನ್ನ ಸ್ನೇಹಿತನನ್ನು ಭೇಟಿಯಾಗಬೇಕು ಎಂದು ಹೇಳಿ ಮನೆಯಿಂದ ಹೋಗಿದ್ದಳು. ಕೆಲವು ದಿನಗಳ ಹಿಂದೆ ನಾನು ಅವಳೊಂದಿಗೆ ವಾಟ್ಸಾಪ್‌ನಲ್ಲಿ ಮಾತನಾಡಿದ್ದೇನೆ ಮತ್ತು ಅವಳು ಲಾಹೋರ್‌ನಲ್ಲಿದ್ದಾಳೆಂದು ತಿಳಿದಿದ್ದೇನೆ” ಎಂದು ಅರವಿಂದ್ ಪೊಲೀಸರಿಗೆ ತಿಳಿಸಿದ್ದಾರೆ. ಅವರಿಬ್ಬರೂ 2007 ರಲ್ಲಿ ವಿವಾಹವಾದರು ಮತ್ತು ಅಂದಿನಿಂದ ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಪತಿ ಮಾಹಿತಿ ನೀಡಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 18 =
Remember me
