ನವದೆಹಲಿ:ದೇಶದಲ್ಲಿನ ಮಸೂರ್​ (ಲೆಂಟಿಲ್​) ದಾಲ್ ದಾಸ್ತಾನನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬಹಿರಂಗಪಡಿಸುವುದು ಕಡ್ಡಾಯ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಲಾಖೆ ನಿರ್ವಹಿಸುವ ಸ್ಟಾಕ್ ಬಹಿರಂಗಪಡಿಸುವಿಕೆಯ ಪೋರ್ಟಲ್‌ನಲ್ಲಿ (https://fcainfoweb.nic.in/psp) ಮಸೂರ್ ದಾಲ್ ದಾಸ್ತಾನು ಕುರಿತ ವಿವರವನ್ನು ಪ್ರತಿ ಶುಕ್ರವಾರ ಕಡ್ಡಾಯವಾಗಿ ಬಹಿರಂಗಪಡಿಸಬೇಕು ಎಂದು ಅದು ತಿಳಿಸಿದೆ.
ವಿವರ ಬಹಿರಂಗಪಡಿಸದ ಸ್ಟಾಕ್ ಕಂಡುಬಂದಲ್ಲಿ, ಅದನ್ನು ಹೋರ್ಡಿಂಗ್ ಎಂದು ಪರಿಗಣಿಸಲಾಗುತ್ತದೆ ಮತ್ತು ಇಸಿ ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮವನ್ನು ಜಾರಿಗೊಳಿಸಲಾಗುತ್ತದೆ ಎಂದೂ ಇಲಾಖೆ ಎಚ್ಚರಿಕೆ ನೀಡಿದೆ. ವಾರದ ಬೆಲೆ ಪರಿಶೀಲನಾ ಸಭೆಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಈ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಎಲ್​’ಲಿಗೋ’ ತಲುಪಲಿದೆ ಭಾರತ!; ಇದು ಅತೀಂದ್ರಿಯ ವಿಜ್ಞಾನ, ಬಾಹ್ಯಾಕಾಶ ನೋಡಲು ಹೊಸ ದೃಷ್ಟಿ..
ಕನಿಷ್ಠ ಬೆಂಬಲ ಬೆಲೆಯ ಆಸುಪಾಸಲ್ಲಿ ಲಭ್ಯವಿರುವ ಸ್ಟಾಕ್‌ಗಳನ್ನು ಸಂಗ್ರಹಿಸುವುದು ಇದರ ಉದ್ದೇಶವಾಗಿದೆ. ಬೆಲೆ ನಿಯಂತ್ರಣದ ಸುಳಿವುಗಳ ನಡುವೆ ಕೆಲವು ಪೂರೈಕೆದಾರರಿಂದ ಹೆಚ್ಚಿನ ಬಿಡ್‌ಗಳನ್ನು ಸ್ವೀಕರಿಸಿದ ಕಾರಣ ಎನ್​ಎಎಫ್​ಇಡಿ ಮತ್ತು ಎನ್​ಸಿಸಿಎಫ್​ ಆಮದು ಮಾಡಿಕೊಂಡ ಮಸೂರವನ್ನು ಖರೀದಿಸಲು ತಮ್ಮ ಟೆಂಡರ್‌ಗಳನ್ನು ಅಮಾನತುಗೊಳಿಸಬೇಕಾದ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿದೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಕೆನಡದಿಂದ ಮಸೂರ್ ಆಮದು ಹರಿವು ಮತ್ತು ಆಫ್ರಿಕನ್ ದೇಶಗಳಿಂದ ತೊಗರಿ ಆಮದು ಹೆಚ್ಚುತ್ತಿರುವ ಸಮಯದಲ್ಲಿ ಕೆಲವರು ಗ್ರಾಹಕರು ಮತ್ತು ರಾಷ್ಟ್ರದ ಹಿತಾಸಕ್ತಿ ವಿರುದ್ಧ ಮಾರುಕಟ್ಟೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಹೇಳಿದ್ದಾರೆ. ಸರ್ಕಾರವು ಈ ಬೆಳವಣಿಗೆಗಳನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಹಬ್ಬದ ಸಂದರ್ಭದಲ್ಲಿ ಸಮಂಜಸವಾದ ಬೆಲೆಯಲ್ಲಿ ಎಲ್ಲ ಬೇಳೆಕಾಳುಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ದಾಸ್ತಾನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.
ಮಗು ಅಳುತ್ತಿದೆ ಅಂತ ಮೂಗು-ಬಾಯಿ ಒತ್ತಿ ಹಿಡಿದ ಅಪ್ಪ; ಉಸಿರುಗಟ್ಟಿ ಸಾವಿಗೀಡಾದ 14 ತಿಂಗಳ ಮಗ

ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಹೆಸರನ್ನು ಇಸ್ಮಾಯಿಲ್ ಅಂತ ಯಾಕಿಟ್ಟಿಲ್ಲ?: ಕಲ್ಲಡ್ಕ ಪ್ರಭಾಕರ್ ಭಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
