ನೋಯ್ಡಾ:ಸಿಗರೇಟ್​ ವಿಚಾರವಾಗಿ ವಿಶ್ವವಿದ್ಯಾಲಯದಲ್ಲಿ ಖಾಸಗಿ ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದ ಘಟನೆ ನೋಯ್ಡಾದಲ್ಲಿ ನಡೆದಿದೆ.
ಘಟನೆಯು ಗೌತಮ್ ಬುದ್ಧ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಒಟ್ಟು 33 ಜನರನ್ನು ಬಂಧಿಸಿದ್ದಾರೆ. ಮುನ್ಶಿ ಪ್ರೇಮಚಂದ್ ಹಾಸ್ಟೆಲ್‌ನಲ್ಲಿ ಕೆಲವು ವಿದ್ಯಾರ್ಥಿಗಳು ಸಿಗರೇಟ್ ಸೇದುವುದನ್ನು ನೋಡಿದ ಭದ್ರತಾ ಸಿಬ್ಬಂದಿಗಳು ಈ ಕುರಿತು ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಕೊನೆಗೆ ಘರ್ಷಣೆ ಉಂಟಾಗಿದೆ.
ಕೆಲವು ಕೋಲು ಹಿಡಿದ ವ್ಯಕ್ತಿಗಳು ಹಾಸ್ಟೆಲ್‌ನ ಹೊರಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಮತ್ತು ಕಾರುಗಳ ಜಖಂಗೊಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ.
ಈ ಕುರಿತು ಮಾತನಾಡಿದ ಪೊಲೀಸ್ ವಕ್ತಾರರು, ಭಾನುವಾರ ರಾತ್ರಿ 10.30ರ ಸುಮಾರಿಗೆ ಎರಡು ಕಡೆಯವರ ನಡುವೆ ವಾಗ್ವಾದ ನಡೆದು ಘರ್ಷಣೆಗೆ ಉಂಟಾಗಿದೆ. ಈಗಾಗಲೇ ಈ ಬಗ್ಗೆ 33 ಜನರನ್ನು ಬಂಧಿಸಿದ್ದು, ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − three =
Remember me
