ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯ ಅಜಾದ್​ಪುರ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್‌ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ.
ಸಂಜೆ 5:20ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, 11ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಠಾಣಾಧಿಕಾರಿ ಪರಸ್ ಕುಮಾರ್ ಮಾರುಕಟ್ಟೆಯ ಗೇಟ್ ನಂ. 1ರ ಬಳಿ ಒರುವ ಟೊಮ್ಯಾಟೋ ಶೆಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ. ಆದರೆ, ಪ್ಲಾಸ್ಟಿಕ್ ಪೆಟ್ಟಿಗೆಗೆ ಮೊದಲು ಬೆಂಕಿ ಹತ್ತಿಕೊಂಡಿತು ಎಂದು ಸ್ಥಳದಲ್ಲಿದ್ದವರು ಹೇಳುತ್ತಾರೆ. ಇದಾದ ಬಳಿಕ ಬೆಂಕಿ  ಆವರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
VIDEO | Fire breaks out at Azadpur Mandi in Delhi. Multiple fire tenders are at the spot. More details are awaited.pic.twitter.com/Y4LCesLpZV
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − six =
Remember me
