ನವದೆಹಲಿ:ಪಾಕ್ ಆಕ್ರಮಿತ ಕಾಶ್ಮೀರದ ಮುಜಫರಾಬಾದ್​ ನಗರದಲ್ಲಿ ಪಿಒಕೆ ನಿವಾಸಿಗಳು ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ಭಾರಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ಪ್ರದೇಶವನ್ನು ಹಾದುಹೋಗುವ ನೀಲಂ ಮತ್ತು ಜೇಲಂ ನದಿಗಳಿಗೆ ಅಡ್ಡಲಾಗಿ ಅಕ್ರಮವಾಗಿ ಅಣೆಕಟ್ಟೆ ನಿರ್ಮಾಣ ಮತ್ತು ಕೊಹಾಲಾ ಜಲವಿದ್ಯುತ್​ ಘಟಕದ ಸ್ಥಾಪನೆ ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಾಕಿಸ್ತಾನ ಮತ್ತು ಚೀನಾಗಳು ಅಕ್ರಮವಾಗಿ ಅಣೆಕಟ್ಟೆಯನ್ನು ಕಟ್ಟುವುದರಿಂದ ಪರಿಸರಕ್ಕೆ ಭಾರಿ ಹಾನಿಯಾಗುತ್ತದೆ ಎಂಬುದು ಅವರ ಆರೋಪವಾಗಿದೆ. ಪ್ರತಿಭಟನೆಯ ಭಾಗವಾಗಿ ಅವರು #SaveRiversSaveAJK ಎಂಬ ಹ್ಯಾಷ್​ಟ್ಯಾಗ್​ ಅನ್ನು ಟ್ವಿಟ್ಟರ್​ನಲ್ಲಿ ಆರಂಭಿಸಿದ್ದಾರೆ.
ಇದನ್ನೂ ಓದಿ:ಚೀನಾ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್​ಗೆ ದೂರು ಒಯ್ದ ಉಯ್ಗುರ್​ ಸಮುದಾಯ
ಪಾಕಿಸ್ತಾನ ಮತ್ತು ಚೀನಾಗಳು ಯಾವ ಒಪ್ಪಂದದನ್ವಯ ಈ ನದಿಗಳಿಗೆ ಅಡ್ಡಲಾಗಿ ಅಣೆಕಟ್ಟೆಗಳನ್ನು ಕಟ್ಟುತ್ತಿವೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ನದಿಗಳನ್ನು ಆಕ್ರಮಿಸಿಕೊಳ್ಳುವ ಮೂಲಕ ಉಭಯ ರಾಷ್ಟ್ರಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ ಎಂದು ಆರೋಪಿಸಿದರು.
ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್​ನ ಭಾಗವಾಗಿ ಚೀನಾದ ಕಂಪನಿಯೊಂದು 1,124 ಮೆಗಾವಾಟ್​ ಸಾಮರ್ಥ್ಯದ ಜಲವಿದ್ಯುತ್​ ಘಟಕವನ್ನು ನಿರ್ಮಿಸುತ್ತಿದ್ದು, ಇದಕ್ಕಾಗಿ 2.4 ಶತಕೋಟಿ ಡಾಲರ್​ ಹಣ ವೆಚ್ಚ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಅಣೆಕಟ್ಟೆಗಳನ್ನು ನಿರ್ಮಿಸಲಾಗುತ್ತಿದೆ ಎನ್ನಲಾಗಿದೆ.
ಜಿಹಾದಿಗಳ ಜಹಗೀರು ಪಿಒಕೆಯಲ್ಲಿ ಲೈಂಗಿಕ ಜೀತ ಪದ್ಧತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + thirteen =
Remember me
