ದಿಮಾಪುರ್:ಭಾರಿ ಮಳೆಗೆ ಬೃಹತ್ ಬಂಡೆಗಳು ಗುಡ್ಡದ ಮೇಲಿಂದ ರಸ್ತೆಗೆ ಉರುಳಿ ಬಿದ್ದ ಪರಿಣಾಮವಾಗಿ ಕ್ಷಣಮಾತ್ರದಲ್ಲೇ ಮೂರು ಕಾರುಗಳು ಅಪ್ಪಚ್ಚಿಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಗಾಲ್ಯಾಂಡ್​ನ ಚುಮೌಕೆಡಿಮಾ ಜಿಲ್ಲೆಯಲ್ಲಿ ಇಂದು ಸಂಜೆ ಈ ಭೀಕರ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 29ರ ಚೆಕ್​ಪೋಸ್ಟ್​ನಲ್ಲಿ ಸಂಜೆ 5 ಗಂಟೆ ಸುಮಾರಿಗೆ ವಾಹನಗಳು ನಿಂತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತರಿಬ್ಬರ ಪೈಕಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಉಡುಪಿ ಜಿಲ್ಲೆಯ ಟ್ರ್ಯಾಕ್​ನ ಎಲ್ಲ ರೈಲುಗಳು ಎರಡು ಗಂಟೆಗಳಿಂದ ಸ್ಥಗಿತ!
ಎರಡು ಬೃಹತ್ ಬಂಡೆಗಳು ಉರುಳಿಬಿದ್ದಿದ್ದು, ಅದರ ತೀವ್ರತೆ ಎಷ್ಟಿತ್ತೆಂದರೆ.. ಒಂದು ಬಂಡೆ ಎರಡು ಕಾರುಗಳನ್ನು ಕ್ಷಣಮಾತ್ರದಲ್ಲಿ ಅಪ್ಪಚ್ಚಿಗೊಳಿಸಿದೆ. ಇನ್ನೊಂದು ಬಂಡೆ ಮತ್ತೊಂದು ಕಾರಿನ ಮೇಲೆ ಬಿದ್ದಿದ್ದು ಅದು ಕೂಡ ಸಂಪೂರ್ಣ ಜಖಂಗೊಂಡಿದೆ. ಈ ದೃಶ್ಯ ಹಿಂದಿದ್ದ ಇನ್ನೊಂದು ಕಾರಿನಲ್ಲಿನ ಡ್ಯಾಷ್​ಬೋರ್ಡ್​ ಕ್ಯಾಮೆರಾದ ವಿಡಿಯೋದಲ್ಲಿ ಸೆರೆಯಾಗಿದೆ.
#WATCH| A massive rock smashed a car leaving two people dead and three seriously injured in Dimapur’s Chumoukedima, Nagaland, earlier today
(Viral video confirmed by police)pic.twitter.com/0rVUYZLZFN
— ANI (@ANI)July 4, 2023

ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 5 =
Remember me
