ಕಾನ್ಪುರ:ಯುವತಿಯರಿಗೆ ನೀಲಿ ಚಿತ್ರದ ದೃಶ್ಯಗಳನ್ನು ತೋರಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಮುಸ್ಲಿಂ ಧರ್ಮಗುರುನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಕಾನ್ಪುರ ಬಳಿ ನಡೆದಿದೆ.
ಇದನ್ನೂ ಓದಿ:IRCTC ವೆಬ್‌ಸೈಟ್ ಹ್ಯಾಕ್ ಮಾಡಿ ನಕಲಿ ತತ್ಕಾಲ್ ಟಿಕೆಟ್‌ಗಳಿಂದ 30 ಲಕ್ಷ ಗಳಿಸಿದ ಖದೀಮ..!
ಮೌಲ್ವಿ ಮೊಹಮ್ಮದ್ ಅಮೀರ್​ ಎಂಬಾತನೇ ಎಸಗಿದ್ದಾನೆಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯು ಚಾಮನಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಮ್ಮ ಮಗಳಿಗೆ ಅಶ್ಲೀಲ ತುಣುಕುಗಳನ್ನು ತೋರಿಸಿ ಬಲವಂತವಾಗಿ ಕಿರುಕುಳ ನೀಡಲು ಪ್ರಯತ್ನಿಸಿದ್ದಾನೆ ಎಂದು ಬಾಲಕಿಯ ಪೋಷಕರು ಆರೋಪಿಸಿ ದೂರು ನೀಡಿದಾಗ ಘಟನೆಯು ಬೆಳಕಿಗೆ ಬಂದಿದೆ.
ಕುಟುಂಬದ ಸದಸ್ಯರ ಪ್ರಕಾರ, ಆರೋಪಿಯು ಈ ಪ್ರದೇಶದಲ್ಲಿನ ಮಕ್ಕಳಿಗೆ ಪ್ರಾರ್ಥನೆಗಳನ್ನು ಕಲಿಸುವುದರ ಜತೆಗೆ ಹುಡುಗಿಯರಿಗೆ ತಪ್ಪು ಮಾಡುವಂತೆ ಹೇಳುತ್ತಿದ್ದನು.ಹಲವು ಬಾರಿ ತಮ್ಮ ಮಕ್ಕಳಿಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಪೋಸ್ಕೋ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಆನಂದ್ ಪ್ರಕಾಶ್ ತಿವಾರಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
