ನವದೆಹಲಿ/ಮುಂಬೈ:ಕೋವಿಡ್​ ಲಾಕ್​ಡೌನ್​ ನಡುವೆ ಮಹಾರಾಷ್ಟ್ರದಲ್ಲಿ ಉದ್ಘವಿಸಬಹುದಾಗಿದ್ದ ಸಂವಿಧಾನ ಬಿಕ್ಕಟ್ಟಿಗೆ ಮಂಗಳ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಹಾರಾಷ್ಟ್ರ ವಿಧಾನಪರಿಷತ್​ನ 9 ಸ್ಥಾನಗಳಿಗೆ ಮೇ 21ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಯಲ್ಲಿ ಉದ್ಧವ್​ ಠಾಕ್ರೆ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ ರಚಿಸಿಕೊಂಡು, ಸಿಎಂ ಆಗಿ ಆಯ್ಕೆಯಾಗಿದ್ದರು. 2019ರ ನವೆಂಬರ್​ 28ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದ ಇವರು ವಿಧಾನಪರಿಷತ್​ ಅಥವಾ ವಿಧಾನಸಭೆ ಸದಸ್ಯರಾಗಿರಲಿಲ್ಲ. ಆದಕಾರಣ, ಆರು ತಿಂಗಳ ಒಳಗಾಗಿ ಯಾವುದಾದರೂ ಒಂದು ಸದನದ ಸದಸ್ಯತ್ವ ಪಡೆದುಕೊಳ್ಳುವುದು ಅನಿವಾರ್ಯವಾಗಿತ್ತು. ಇದಕ್ಕಾಗಿ ಅವರಿಗೆ ಮೇ 27ರವರೆಗೆ ಸಮಯಾವಕಾಶ ಇತ್ತು.
ಮಹಾರಾಷ್ಟ್ರದಲ್ಲಿ ಕರೊನಾ ಪಿಡುಗು ಜೋರಾಗಿದ್ದು, ಸೋಂಕಿತರ ಸಂಖ್ಯೆ 10 ಸಾವಿರ ದಾಟಿದ್ದು, ರಾಜ್ಯಾದ್ಯಂತ ಲಾಕ್​ಡೌನ್​ ಘೋಷಿಸಲಾಗಿದೆ. ಹೀಗಾಗಿ ವಿಧಾನಸಭೆ ಅಥವಾ ವಿಧಾನಪರಿಷತ್​ ಚುನಾವಣೆ ನಡೆಸುವುದು ಅಸಾಧ್ಯವಾಗಿತ್ತು.
ಒಂದು ವೇಳೆ ಮೇ 27ರೊಳಗೆ ವಿಧಾನಪರಿಷತ್​ ಚುನಾವಣೆ ನಡೆಸಲು ಅಸಾಧ್ಯವಾಗಿದ್ದರೆ, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗುತ್ತಿತ್ತು. ಕೋವಿಡ್​ನಂಥ ಸೂಕ್ಷ್ಮ ಪರಿಸ್ಥಿತಿ ಇರುವಾಗ ಇದು ಸಂವಿಧಾನಿಕ ಬಿಕ್ಕಟ್ಟಿಗೆ ಕಾರಣವಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಭಗತ್​ಸಿಂಗ್​ ಕೋಶಯಾರಿ ಅವರನ್ನು ಭೇಟಿಯಾಗಿದ್ದ ಉದ್ಧವ್​ ಠಾಕ್ರೆ ವಿಧಾನಪರಿಷತ್​ ಚುನಾವಣೆಯನ್ನು ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸುವಂತೆ ಮನವಿ ಮಾಡಿಕೊಂಡಿದ್ದರು. ಅದರಂತೆ ರಾಜ್ಯಪಾಲರು ವಿಧಾನಪರಿಷತ್​ ಚುನಾವಣೆ ಏರ್ಪಡಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದ್ದರು. ಇದನ್ನು ಪರಿಗಣಿಸಿದ ಚುನಾವಣಾ ಆಯೋಗ, ಮೇ 21ರಂದು ವಿಧಾನಪರಿಷತ್​ ಚುನಾವಣೆ ನಡೆಸುವ ನಿರ್ಧಾರ ಪ್ರಕಟಿಸಿತು ಎನ್ನಲಾಗಿದೆ. ಇದರಿಂದಾಗಿ ಉದ್ಧವ್​ ಠಾಕ್ರೆ ಸಿಎಂ ಸ್ಥಾನ ಅಬಾಧಿತವಾಗಿ ಮುಂದುವರಿಯುವುದು ಖಚಿತವಾಗಿದೆ.
ಮದುವೆಗೆ ಪೊಲೀಸರು ಕೊಡಲಿಲ್ಲ ಪರ್ಮಿಷನ್​, ಮದುಮಗ ಬಿಟ್ಟಾನೆಯೇ? ಸೈಕಲ್​ ಏರಿಯೇ ಬಿಟ್ಟ… ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eight =
Remember me
