ನವದೆಹಲಿ:ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವ್ಯವಸ್ಥೆಯ ವಿರುದ್ಧ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮುಷ್ಕರದ ಮಧ್ಯೆ ಜನರು ಮನೆಯೊಳಗೆ ಇರುವಂತೆ ಒತ್ತಾಯಿಸಿ ಢಾಕಾದಲ್ಲಿರುವ ಭಾರತದ ರಾಯಭಾರಿ ಕಚೇರಿ ನೀಡಿದ ಸಲಹೆಯನ್ನು ಅನುಸರಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ (ಜುಲೈ 19) ಬಾಂಗ್ಲಾದೇಶದಲ್ಲಿರುವ ಭಾರತೀಯರಿಗೆ ವಿನಂತಿಸಿದೆ.
ಇದನ್ನು ಓದಿ:ಗುಂಡಿನ ದಾಳಿ ಬಳಿಕ ಡೊನಾಲ್ಡ್​ ಟ್ರಂಪ್ ಮೊದಲ​​ ಮಾತು; ಅಮೆರಿಕದ ಮಾಜಿ ಅಧ್ಯಕ್ಷ ಹೇಳಿದ್ದೇನು ಗೊತ್ತಾ?
ಬಾಂಗ್ಲಾದೇಶದಲ್ಲಿರುವ ಭಾರತೀಯ ಪ್ರಜೆಗಳಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆಗಳಲ್ಲಿ ಹೈಕಮಿಷನ್ ಮತ್ತು ಸಹಾಯಕ ಹೈಕಮಿಷನ್‌ಗಳು ಲಭ್ಯವಿವೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್​​​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸಮುದಾಯದ ಸದಸ್ಯರು ಮತ್ತು ಬಾಂಗ್ಲಾದೇಶದಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳು ಹೊರಬರದಂತೆ ಮತ್ತು ತಮ್ಮ ನಿವಾಸದ ಆವರಣದ ಹೊರಗೆ ಓಡಾಡದಂತೆ ಹೈಕಮಿಷನ್​ ಸೂಚಿಸಿತ್ತು.
Indian nationals in Bangladesh are requested to follow the advisory issued by the High Commission of India in Dhaka. The High Commission and Assistant High Commissions remain available on helpline numbers for any assistance required by Indian nationals.https://t.co/MqNRVvmrJ8
ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಬಸ್ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ದೇಶದಲ್ಲಿ ಇಂಟರ್​​ನೆಟ್​​ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬಸ್, ರೈಲು ಮತ್ತು ಮೆಟ್ರೋ ಸಂಚಾರವನ್ನು ನಿಲ್ಲಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನೆ ಪಥಸಂಚಲನ ನಡೆಸುತ್ತಿದೆ. ಇದುವರೆಗೂ ಪ್ರತಿಭಟನೆಯಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದಾರೆ ಮತ್ತು 2500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾಗಿಯಾಗಿರುವ ಕುಟುಂಬದ ಸದಸ್ಯರಿಗೆ ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ಕೊನೆಗೊಳಿಸಲು ಬೇಡಿಕೆಯಿದೆ. ಆದರೆ ಪ್ರಧಾನಿ ಶೇಖ್ ಹಸೀನಾ ಅವರು ಮೀಸಲಾತಿಯನ್ನು ಕೊನೆಗೊಳಿಸಲು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಕಾರಣಕ್ಕಾಗಿ ಅಲ್ಲಿ ಪ್ರತಿಭಟನೆ ನಡೆಯುತ್ತಿದೆ.(ಏಜೆನ್ಸೀಸ್​)
ಕೆಲ ವರ್ಷಗಳಲ್ಲಿ ಮುಸ್ಲಿಂ ಪ್ರಾಬಲ್ಯದ ರಾಜ್ಯವಾಗಲಿದೆ ಅಸ್ಸಾಂ; ಸಿಎಂ ಹಿಮಂತ ಬಿಸ್ವಾ ಶರ್ಮಾ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 4 =
Remember me
