ನವದೆಹಲಿ:ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಕಳಿಸಿಕೊಡುವ ಮೂಲಕ ದೇಶದ್ರೋಹಿ ಕೆಲಸದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರಿ ನೌಕರನೊಬ್ಬನನ್ನು ರಾಜಧಾನಿಯ ಪೊಲೀಸರು ಬಂಧಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಕಾರು ಚಾಲಕ ಬಂಧಿತ ಆರೋಪಿ.
ವಿದೇಶಾಂಗ ಸಚಿವಾಲಯದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀಕೃಷ್ಣನ್ ಎಂಬಾತ ಹನಿಟ್ರ್ಯಾಪ್​ಗೆ ಒಳಗಾಗಿ ಪಾಕಿಸ್ತಾನಕ್ಕೆ ದೇಶದ ರಹಸ್ಯ ಮಾಹಿತಿಯನ್ನು ಕಳಿಸಿಕೊಡುತ್ತಿದ್ದ ಆರೋಪದ ಮೇಲೆ ಆತನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಪಾಕಿಸ್ತಾನದ ಇಂಟೆಲೆಜೆನ್ಸ್ ಏಜೆನ್ಸಿಯಿಂದ ಹನಿಟ್ರ್ಯಾಪ್​ಗೆ ಒಳಗಾದ ಶ್ರೀಕೃಷ್ಣನ್, ದೇಶದ ಭದ್ರತೆಗೆ ಸಂಬಂಧಿಸಿದ ಗುಪ್ತ ಮಾಹಿತಿಯನ್ನು ಐಎಸ್​​ಐಗೆ ರವಾನಿಸುತ್ತಿದ್ದ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹುಡುಗಿಯರ ಫೋಟೋ ಹಾಗೂ ವಿಡಿಯೋಗಳನ್ನೂ ಆತನಿಂದ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಲಾಗುತ್ತಿದೆ.
ಪೊಲೀಸ್ ಹಾಗೂ ಇಂಟೆಲಿಜೆನ್ಸ್ ಏಜೆನ್ಸಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಸುತ್ತಿದ್ದು, ವಿದೇಶಾಂಗ ಸಚಿವಾಲಯದ ಇತರರೂ ಇದರಲ್ಲಿ ಪಾಲ್ಗೊಂಡಿದ್ದರೇ ಎಂಬ ಮಾಹಿತಿಯನ್ನೂ ಕಲೆ ಹಾಕುತ್ತಿದ್ದಾರೆ. ಅದಾಗ್ಯೂ ಸಚಿವಾಲಯದಿಂದ ಈ ಕುರಿತಂತೆ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ. –ಏಜೆನ್ಸೀಸ್

ಮತ್ತೆ ಬರುತ್ತೆ ಆರ್ಕುಟ್​?; ರಿಪ್​ ಟ್ವಿಟರ್​ ಟ್ರೆಂಡಿಂಗ್​ ಬೆನ್ನಿಗೇ ಗರಿಗೆದರಿದ ನಿರೀಕ್ಷೆ..

ಒಂದೂವರೆ ವರ್ಷದ ಮಗನನ್ನೇ ಮಾರಿದ ತಾಯಿ; ನಾಲ್ಕೂವರೆ ವರ್ಷ ಹುಡುಕಾಡಿ ಪುತ್ರನನ್ನು ಪತ್ತೆ ಮಾಡಿ ಪಡೆದ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
