ನವದೆಹಲಿ:ಕೋರ್ಟ್​ಗಳು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ವರದಿ ಮಾಡದಂತೆ ಚುನಾವಣಾ ಆಯೋಗ ಸಲ್ಲಿಕೆ ಮಾಡಿರುವ ಅರ್ಜಿಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇಂಥ ನಿರ್ಬಂಧ ಹೇರಿಕೆಗೆ ಮನವಿ ಮಾಡುವ ಬದಲು ಸಾಂವಿಧಾನಿಕ ಸಂಸ್ಥೆಗಳು ಉತ್ತಮವಾಗಿ ಕೆಲಸ ಮಾಡಬಹುದು ಎಂದು ಹೇಳಿದೆ. ಸಂವಿಧಾನದ 19ನೇ ವಿಧಿ ಪ್ರಕಾರ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ಇದು ಮಾಧ್ಯಮಗಳಿಗೂ ಅನ್ವಯವಾಗುತ್ತದೆ. ಇದನ್ನು ಹತ್ತಿಕ್ಕುವ ಕ್ರಮವನ್ನು ಒಪು್ಪವುದಿಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸ್ಪಷ್ಟವಾಗಿ ಹೇಳಿದೆ. ಕೋರ್ಟ್ ಕಲಾಪದ ವರದಿ ಕುರಿತು ಚುನಾವಣಾ ಆಯೋಗ ಮಾಡಿರುವ ಮನವಿಯಲ್ಲಿ ಯಾವುದೇ ಹುರುಳಿಲ್ಲ. ನ್ಯಾಯಾಂಗ ವ್ಯವಸ್ಥೆ ಪಾರದರ್ಶಕವಾಗಿರಲು ಮಾಧ್ಯಮಗಳ ವರದಿ ಅಗತ್ಯ. ಇವುಗಳಿಗೆ ನಿರ್ಬಂಧ ಹೇರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಪೀಠ ಹೇಳಿದೆ.
ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ನೀಡಿರುವ ಹೇಳಿಕೆ ತೀಕ್ಷ್ಣವಾದುದು ಹಾಗೂ ಅದರ ಹೋಲಿಕೆ ಸರಿಯಾದುದಲ್ಲ. ಇಂಥ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆ ವಹಿಸಬೇಕು. ನ್ಯಾಯಾಂಗದಲ್ಲಿ ಭಾಷೆ ಬಳಕೆ ಮಹತ್ವವಾದದ್ದು. ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕರೊನಾ ಕೇಸ್ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಜನರ ಜೀವ ರಕ್ಷಣೆ ಇದರ ಹಿಂದಿನ ಉದ್ದೇಶವಾಗಿದೆ ಎಂದು ಹೇಳಿದೆ.
ಏನಿದು ಪ್ರಕರಣ?
ದೇಶದಲ್ಲಿ ಕರೊನಾ ತೀವ್ರಗೊಳ್ಳಲು ಚುನಾವಣಾ ಆಯೋಗ ಕೂಡ ಪ್ರಮುಖ ಕಾರಣ ಎಂದು ಮದ್ರಾಸ್ ಹೈಕೋರ್ಟ್ ಏ. 26ರಂದು ತಪರಾಕಿ ಹಾಕಿತ್ತು. ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣವನ್ನು ಏಕೆ ದಾಖಲು ಮಾಡಬಾರದು ಎಂದು ಪ್ರಶ್ನೆ ಮಾಡಿತ್ತು. ಇದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಇಂಥ ಅಂಶಗಳನ್ನು ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಆಯೋಗ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 12 =
Remember me
