ಭಾಗಲ್ಪುರ:ಹೆರಿಗೆಗೆಂದು ತೆರಳಿದ್ದ ಮಹಿಳೆಯ ಹೊಟ್ಟೆಯಲ್ಲಿ ಬಟ್ಟೆಯನ್ನು ಬಿಟ್ಟು ಹೊಲಿಗೆ ಹಾಕಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಪತ್ನಿಯೂ ಸೇರಿದಂತೆ ಆಕೆಯ ಕುಟುಂಬಸ್ಥರ ಮೇ ಹಲ್ಲೆ ನಡೆಸಿ, 2ನೇ ಅಂತಸ್ತಿನಿಂದ ಜಿಗಿದ ಭೂಪ..ಭಾಗಲ್ಪುರದ ನಾಥನಗರದ ನಿವಾಸಿ ಪ್ರಿಯಾಂಕಾ ಕುಮಾರಿ ಫೆಬ್ರವರಿಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಮಗುವಿಗೆ ಜನ್ಮ ನೀಡಿದ್ದರು. ನಾಲ್ಕು ತಿಂಗಳ ನಂತರ, ಆಕೆ ತೀವ್ರವಾದ ನೋವನ್ನು ಅನುಭವಿಸಿದ್ದು, ಆ ಬಳಿಕ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್​ ಮಾಡಿಸಿದ್ದಳು. ಈ ವೇಳೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅವಳ ಹೊಟ್ಟೆಯ ಪ್ರದೇಶದಲ್ಲಿ ಉಳಿದಿರುವ ಬಟ್ಟೆಯಿಂದಾಗಿ ಅವಳ ಕರುಳುಗಳು ಉಬ್ಬಿವೆ ಎಂದು ತಿಳಿದು ಬಂದಿದೆ.ನಂತರ ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಂದು ಶಸ್ತ್ರಚಿಕಿತ್ಸೆಯನ್ನು ನಡೆಸಿ ಆಕೆಯ ಹೊಟ್ಟೆಯಲ್ಲಿದ್ದ ಬಟ್ಟೆಯನ್ನು ತೆಗೆಯಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಬ್ರತ್ ಕುಮಾರ್ ಸೇನ್ ಅವರು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಉದಯ್ ನಾರಾಯಣ ಸಿಂಗ್​ಗೆ ಪತ್ರ ಬರೆದು ಈ ಸಂಬಂಧ ಸಮಿತಿಯನ್ನು ರಚಿಸಿ ತನಿಖೆಯನ್ನು ಆರಂಭಿಸುವಂತೆ ಸೂಚಿಸಿದ್ದಾರೆ. ಅಲ್ಲದೇ. ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸೇನ್​ ಸೂಚಿಸಿದ್ದಾರೆ.
ಕುಟುಂಬದ ಆರ್ಥಿಕ ಸಂಕಷ್ಟ:ವೈದ್ಯರ ನಿರ್ಲಕ್ಷ್ಯವು ಪ್ರಿಯಾಂಕಾಳ ಕುಟುಂಬವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು, ಚಿಕಿತ್ಸೆಯ ವೆಚ್ಚವನ್ನು ಭರಿಸುವುದು ಕಷ್ಟಕರವಾಗಿದೆ. ಇಡೀ ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿದ್ದು, ಕಳೆದ ನಾಲ್ಕು ತಿಂಗಳಿನಿಂದ ಈಗಾಗಲೇ ಲಕ್ಷಗಟ್ಟಲೆ ಖರ್ಚು ಮಾಡಿದೆ ಎಂದು ಆಕೆಯ ಪತಿ ಚಂದನ್​ ಹೇಳಿದ್ದಾರೆ. ಅಲ್ಲದೇ, ಸರಕಾರದಿಂದ ಪರಿಹಾರ ಹಾಗೂ ನ್ಯಾಯ ದೊರಕಿಸಿಕೊಡಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದು, ವೈದ್ಯರು ಆಕೆಗೆ ಕಾಯಿಲೆಯ ಸಂಪೂರ್ಣ ಚಿಕಿತ್ಸೆಗಾಗಿ ಇನ್ನೂ ಎರಡು ತಿಂಗಳು ದಾಖಲಾಗುವಂತೆ ಸಲಹೆ ನೀಡುತ್ತಿದ್ದಾರೆ. ಕಳೆದ 4 ತಿಂಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಈಗ ಹೆಚ್ಚಿನ ಚಿಕಿತ್ಸೆ ಪಡೆಯುವುದು ಕಷ್ಟ ಎನಿಸುತ್ತಿದೆ. ಪತ್ನಿಯ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಪತಿ ಚಂದನ್ ಜಿಲ್ಲಾ ಮ್ಯಾಜಿಸ್ಟ್ರೇಟ್​ಗೆ ಮನವಿ ಮಾಡಿದ್ದಾನೆ.(ಏಜೆನ್ಸೀಸ್)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × four =
Remember me
