ಬೆಂಗಳೂರು:ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂಬ ಕುರಿತು ಸೋಮವಾರ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್, ತೀರ್ಮಾನವನ್ನು ಮತ್ತೆ ಎರಡು ದಿನಗಳ ಕಾಲ ಮುಂದೂಡಿದ್ದಾರೆ.
ಈ ಕುರಿತು ಅವರೇ ಸೋಮವಾರ ಹೇಳಿಕೆ ನೀಡಿದ್ದಾರೆ. ಆನ್‌ಲೈನ್ ಶಿಕ್ಷಣ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಇವತ್ತು ಇಲಾಖೆ ಅಧಿಕಾರಿಗಳ ಸಭೆ ನಡೆಸಿದೆ. ಆದರೆ, ಆ ಸಭೆಯಲ್ಲಿ ನಡೆದ ಚರ್ಚೆ ಅಪೂರ್ಣವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ;ಒಂದೇ ವರ್ಷದಲ್ಲಿ 1.25 ಕೋಟಿ ರೂ. ಗಳಿಸಿದ ವಿಜ್ಞಾನ ಶಿಕ್ಷಕಿಯ ವಂಚನಾ ಕಲೆ; ಬೆಳಕಿಗೆ ಬಂದೇ ಇಲ್ಲ ಅನಾಮಿಕಾ
ನಾಳೆ (ಮಂಗಳವಾರ) ಪೂರ್ವ ನಿಯೋಜಿತ ಕಾರ್ಯಕ್ರಮದಂತೆ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳ ಪ್ರವಾಸವಿದೆ. ಅಲ್ಲಿ ಶಿಕ್ಷಣ ಇಲಾಖೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.ಆನ್‌ಲೈನ್ ಶಿಕ್ಷಣ ಕುರಿತು ಮತ್ತೆ ಬುಧವಾರವೇ ಸಭೆ ಸಾಧ್ಯವಾಗಲಿದೆ. ಅದರಲ್ಲಿ ಇನ್ನಷ್ಟು ವಿಸ್ತೃತವಾಗಿ ವಿಚಾರ ವಿಮರ್ಶೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ;ಚೀನಾ ಕರಾವಳಿಯಲ್ಲಿ ಕಳವಳಕಾರಿ ವಿದ್ಯಮಾನ, ತೀರ ಸಮೀಪಿಸುತ್ತಿದ್ದಂತೆ ದಿಕ್ಕು ತಪ್ಪಿದ ಹಡಗುಗಳು…!
ಹೀಗಾಗಿ ರಾಜ್ಯದಲ್ಲಿ ಆನ್‌ಲೈನ್ ಶಿಕ್ಷಣ ನಡೆಸಬೇಕೆ ಬೇಡವೇ ಎಂಬ ಕುರಿತ ನಿರ್ಧಾರಕ್ಕಾಗಿ ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು, ಪಾಲಕರು ಮತ್ತು ಮಕ್ಕಳು ಇನ್ನು ಎರಡು ದಿನ ಕಾಯುವುದು ಅನಿವಾರ್ಯವಾಗಿದೆ.
ಕರೊನಾ ಲಸಿಕೆ ಭಾರತದಲ್ಲಿ ಸೆಪ್ಟೆಂಬರ್​ಗೆ ಸಿಗೋದು ಪಕ್ಕಾ; ಜಿದ್ದಿಗೆ ಬಿದ್ದು ಉತ್ಪಾದನೆಯಲ್ಲಿ ತೊಡಗಿವೆ ಕಂಪನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
