ನವದೆಹಲಿ:ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಬಳಿಕ ಬಿಜೆಪಿ ಜೊತೆ ಮೈತ್ರಿ ಸಂಬಂಧ ಕಳೆದುಕೊಂಡಿದ್ದ ಹಲವು ಪ್ರಾದೇಶಿಕ ಪಕ್ಷಗಳು ಮತ್ತೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿವೆ.
ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಜಗದೀಪ್ ಧನಕರ್ ತೀವ್ರ ಆಕ್ರೋಶ: ಕಾರಣ ಹೀಗಿದೆ?
#WATCH| Chennai, Tamil Nadu: Former Chief Minister and ousted AIADMK leader O Panneerselvan says, "Alliance talks are finalised. We will announce after saying to you. Talks are going on with the BJP. A Mega alliance will be formed in Tamil Nadu to choose Narendra Modi as PM…pic.twitter.com/lPkgIQicTI
— ANI (@ANI)February 10, 2024

ಪ್ರಧಾನಿ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂಬುದು ನಮ್ಮೆಲ್ಲರ ಆಸೆ ಎಂದು ಮಾಜಿ ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ಹೇಳಿದ್ದಾರೆ.ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದೊಂದಿಗಿನ ನಾಲ್ಕು ವರ್ಷಗಳ ಮೈತ್ರಿಯಿಂದ ಹೊರ ಬಂದಿರುವುದಾಗಿ 2023ರ ಸೆಪ್ಟೆಂಬರ್‌ನಲ್ಲಿ ಎಐಎಡಿಎಂಕೆ ಹೇಳಿಕೊಂಡಿತ್ತು. ಜತೆಗೆ, 2024ರ ಲೋಕಸಭಾ ಚುನಾವಣೆಯನ್ನು ಪ್ರತ್ಯೇಕವಾಗಿ ಎದುರಿಸಲು ಯೋಜನೆ ರೂಪಿಸಲಾಗುವುದು ಎಂದು ಪಕ್ಷ ಹೇಳಿತ್ತು.
ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಅಧ್ಯಕ್ಷ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ತಮಿಳುನಾಡಿನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾತುಕತೆ ಅಂತಿಮಗೊಂಡಿದ್ದು, ಈ ಕುರಿತು ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ರಾಜ್ಯದಲ್ಲಿ ಮಹಾಮೈತ್ರಿಕೂಟ ರಚಿಸಲಾಗುವುದು ಮಾಜಿ ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ಹೇಳಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರು ಎಐಎಡಿಎಂಕೆಯಿಂದ ಉಚ್ಛಾಟನೆಯ ನಂತರ ಎಐಎಡಿಎಂಕೆ ಪಕ್ಷದಿಂದ ಬೇರ್ಪಟ್ಟು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (OPS) ಅನ್ನು ರಚಿಸಿದರು.
ಎನ್‌ಡಿಎ ಜತೆಗಿನ ಮೈತ್ರಿ ಅಂತ್ಯಕ್ಕೆ ಕಾರಣವೇನು ಎಂಬುದರ ಕುರಿತು ಅವರು ಏನನ್ನೂ ಹೇಳಿರಲಿಲ್ಲ. ಆದರೆ ರಾಜ್ಯದಲ್ಲಿನ ಬಿಜೆಪಿ ನಾಯಕತ್ವ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಲಾಗಿದೆ ಎಂದಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − 3 =
Remember me
