ನವದೆಹಲಿ:ಒಂದು ವರ್ಷಕ್ಕಿಂತಲೂ ಅಧಿಕ ಸಮಯದಿಂದ ಬಂಧನದಲ್ಲಿದ್ದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
‘ತಾಯಿಯವರ ಅಕ್ರಮ ಬಂಧನ ಅಂತಿಮವಾಗಿ ಕೊನೆಗೊಂಡಿದೆ, ಈ ಕಠಿಣ ಸಮಯದಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಇಲ್ತಿಜಾ ಮುಫ್ತಿ ಟ್ವೀಟ್ ಮಾಡಿದ್ದಾರೆ. ತನ್ನ ತಾಯಿಯ ಬಿಡುಗಡೆ ಕೋರಿ ಇಲ್ತಿಜಾ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವಾರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮೆಹಬೂಬಾರನ್ನು ಇನ್ನು ಎಷ್ಟು ಸಮಯದವರೆಗೆ ಬಂಧನದಲ್ಲಿಡುತ್ತೀರಿ ಎಂಬುದನ್ನು 2 ವಾರಗಳೊಳಗಾಗಿ ತಿಳಿಸುವಂತೆ ಆದೇಶಿಸಿತ್ತು. ಈ ಗಡುವು ಮುಗಿಯುವ ಹಂತದಲ್ಲಿರುವ ಬೆನ್ನಲ್ಲೇ ಮೆಹಬೂಬಾರನ್ನು ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಆಗಸ್ಟ್ 5ರಂದು ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ವೇಳೆ ಮೆಹಬೂಬಾ ಸೇರಿ ಕಾಶ್ಮೀರದ ಹಲವು ನಾಯಕರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿತ್ತು.
ನಮ್ಮ ಹೆಣ್ಮಕ್ಕಳನ್ನು ಮುಟ್ಟಿದರೆ ನಿಮಗೆ ಮರಣವೇ ಶಿಕ್ಷೆ: ಲವ್ ಜಿಹಾದಿಗಳಿಗೆ ಅಸ್ಸಾಂ ಸಚಿವನ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
