ಶ್ರೀನಗರ: ಜಮ್ಮು- ಕಾಶ್ಮೀರದ ಮಾಜಿ ಸಿಎಂ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬಂಧನವನ್ನು 3 ತಿಂಗಳ ಮಟ್ಟಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಭದ್ರತಾ ಕಾನೂನಿನ (ಪಿಎಸ್​ಎ) ಅನ್ವಯ ಈ ಕ್ರಮ ಕೈಗೊಂಡಿರುವುದಾಗಿ ಜಮ್ಮು- ಕಾಶ್ಮೀರ ಆಡಳಿತ ಶುಕ್ರವಾರ ಸ್ಪಷ್ಟಪಡಿಸಿದೆ.
ಕಳೆದ ವರ್ಷ ಆಗಸ್ಟ್ 5ರಂದು ಕಾಶ್ಮೀರಕ್ಕೆ ನೀಡಲಾಗಿದ್ದ 370 ವಿಧಿಯ ಅನ್ವಯದ ವಿಶೇಷ ಸ್ಥಾನಮಾನ ರದ್ದುಪಡಿಸಿ, ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿತ್ತು. ಅದಕ್ಕೂ ಮುನ್ನ ಮೆಹಬೂಬಾ ಸೇರಿ ಹಲವು ಪ್ರಮುಖ ರಾಜಕೀಯ ನೇತಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಗೃಹಬಂಧನಕ್ಕೆ ಒಳಪಡಿಸಲಾಗಿತ್ತು ಮೆಹಬೂಬಾ ಅವರ ಬಂಧನ ಅವಧಿ ಆಗಸ್ಟ್ 5ರಂದು ಮುಗಿಯುವುದರಲ್ಲಿತ್ತು. ಮೆಹಬೂಬಾ ಮುಫ್ತಿಯನ್ನು ಮೊದಲು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿತ್ತು. ನಂತರ ಅವರ ಮೇಲೆ ಪಿಎಸ್​ಎ ಕಾನೂನನ್ನು ಅನ್ವಯಿಸಲಾಗಿತ್ತು.
ಇದನ್ನೂ ಓದಿ:ಈ ಗ್ರಾಮದಲ್ಲಿ ಆನ್​ಲೈನ್ ಕ್ಲಾಸ್​ ಫೇಲಾಯಿತು- ಶಾಲೆಯೇ ಮೊಬೈಲ್ ಆಯಿತು ನೋಡಿ!
ಸದ್ಯ, ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ ಸಹಿತ ಅನೇಕ ರಾಜಕಾರಣಿಗಳನ್ನು ಬಿಡುಗಡೆ ಮಾಡಲಾಗಿದ್ದು, ಎಲ್ಲರೂ ಹೊರಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಅವರ ರಾಜಕೀಯ ನಡೆಗಳಿಗೆ ಸದ್ಯ ಅವಕಾಶವಿಲ್ಲ. (ಏಜೆನ್ಸೀಸ್)
ಜಿರಾಫೆ ಅಂದ್ರೇನೇ ಎತ್ತರ- ಅದ್ರಲ್ಲೂ ಗಿನ್ನೆಸ್ ದಾಖಲೆ ಅಂದ್ರೆ ಇನ್ನೆಷ್ಟು ಎತ್ತರ ಇರಬಹುದು ಅದು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
