ಚೆನ್ನೈ:ಮೇಕೆದಾಟು ಅಣೆಕಟ್ಟೆ ಯೋಜನೆ ಕುರಿತ ಕರ್ನಾಟಕ ಸರ್ಕಾರದ ನಿರ್ಣಯವನ್ನು ವಿರೋಧಿಸಿ ತಮಿಳುನಾಡು ವಿಧಾನಸಭೆ ಒಮ್ಮತದ ನಿರ್ಣಯವನ್ನು ಸೋಮವಾರ ತೆಗೆದುಕೊಂಡಿದೆ. ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಮಂಡಿಸಿದ ನಿರ್ಣಯದ ಪರವಾಗಿ ಕಾಂಗ್ರೆಸ್, ಬಿಜೆಪಿ ಸೇರಿ ಎಲ್ಲ ಪಕ್ಷಗಳ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು.
ಕಾವೇರಿ ನದಿಗೆ ಮೇಕೆದಾಟಿನಲ್ಲಿ ಜಲಾಶಯ ನಿರ್ವಿುಸುವುದಕ್ಕೆ ಅಗತ್ಯ ಹಣವನ್ನು ಕರ್ನಾಟಕ ಸರ್ಕಾರ ಹಂಚಿಕೆ ಮಾಡಿದೆ. ಈ ಕಾಮಗಾರಿಗೆ ಅನುಮತಿಯನ್ನು ಪಡೆದಿಲ್ಲ. ಇದು ಸಮರ್ಥನೀಯವಲ್ಲ. ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಬಾರದು ಎಂಬ ಅಂಶ ನಿರ್ಣಯದಲ್ಲಿ ಉಲ್ಲೇಖವಾಗಿದೆ.
‘ಮೇಕೆದಾಟು ಅಣೆಕಟ್ಟಿನ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಕ್ರಮಕ್ಕೆ ತಡೆಯೊಡ್ಡುವಂತೆ ಕೇಂದ್ರ ಸರ್ಕಾರವನ್ನು ನಾವು ಕೂಡ ಆಗ್ರಹಿಸುತ್ತೇವೆ ಎಂದು ತಮಿಳುನಾಡಿನ ಬಿಜೆಪಿ ನಾಯಕ ನಾಯ್ನಾರ್ ನಾಗೇಂದ್ರನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಅನುಮತಿ ನೀಡಲಿ:ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಕೈಗೊಂಡಿರುವ ನಿರ್ಣಯವನ್ನು ಖಂಡಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕೂಡಲೇ ಪರಿಸರ ಅನುಮತಿಯನ್ನು ನೀಡಲಿ ಎಂದು ತಾಕೀತು ಮಾಡಿದ್ದಾರೆ. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಒಂದು ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ತಮಿಳುನಾಡಿಗೆ ಬಿಡುವಂತೆ ಆದೇಶ ಮಾಡಿದೆ. ಇಷ್ಟು ಪ್ರಮಾಣದ ನೀರು ಪಡೆಯುವುದು ಮಾತ್ರ ತಮಿಳುನಾಡಿಗಿರುವ ಹಕ್ಕು ಎಂದು ವಾಗ್ದಾಳಿ ನಡೆಸಿದ್ದಾರೆ.
ನಿರ್ಣಯಕ್ಕೆ ಕರ್ನಾಟಕ ಖಂಡನೆ:ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಕೈಗೊಂಡಿರುವ ಖಂಡನಾ ನಿರ್ಣಯವನ್ನು ವಿರೋಧಿಸಿ ರಾಜ್ಯ ವಿಧಾನಸಭೆಯಲ್ಲಿಯೂ ನಿರ್ಣಯ ಅಂಗೀಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಮೇಕೆದಾಟು ಯೋಜನೆ ನಮ್ಮ ರಾಜ್ಯಕ್ಕೆ ಮಂಜೂರಾಗಿರುವ ನೀರಿನಲ್ಲಿ ಜಾರಿ ಮಾಡುತ್ತಿರುವ ಯೋಜನೆಯಾಗಿದೆ. ತಮಿಳುನಾಡಿಗೂ ಇದಕ್ಕೂ ಸಂಬಂಧವಿಲ್ಲವೆಂಬುದು ರಾಜ್ಯದ ವಾದವಾಗಿದೆ. ಅದೇ ರೀತಿಯಲ್ಲಿಯೇ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅನಾರೋಗ್ಯದ ನಿಮಿತ್ತ ಸೋಮವಾರ ಅಧಿವೇಶನಕ್ಕೆ ಗೈರಾಗಿದ್ದರು. ಮಂಗಳವಾರ ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಲಿದ್ದಾರೆ. ಅದಕ್ಕೂ ಮೊದಲು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಕಾರಜೋಳ ಹೇಳಿಕೆಯ ನಂತರ ಪ್ರತಿಪಕ್ಷಗಳು ಈ ವಿಷಯದ ಮೇಲೆ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಅಂತಿಮವಾಗಿ ತಮಿಳುನಾಡು ನಿರ್ಣಯ ಖಂಡಿಸಿ ನಿರ್ಣಯ ಅಂಗೀಕರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. ಕೇವಲ ಖಂಡನಾ ನಿರ್ಣಯಕ್ಕೆ ಪ್ರತಿಪಕ್ಷಗಳು ಒಪು್ಪವ ಸಾಧ್ಯತೆ ಕಡಿಮೆ ಇದೆ. ಪರಿಸರ ಇಲಾಖೆಯ ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಅಂಶವನ್ನು ಸೇರಿಸುವಂತೆ ಪಟ್ಟು ಹಿಡಿಯುವ ನಿರೀಕ್ಷೆ ಇದೆ. ಇದು ಸರ್ಕಾರಕ್ಕೆ ಒಪ್ಪಿಗೆಯಾಗುವುದಿಲ್ಲ. ಆದ್ದರಿಂದ ಜಟಾಪಟಿ ಏರ್ಪಡಬಹುದು.
ತಮಿಳುನಾಡು ನಿರ್ಣಯಕ್ಕೆ ಕವಡೆ ಕಿಮ್ಮತ್ತಿಲ್ಲ. ನಮ್ಮ ಪಾಲಿನ ನೀರು ಬಳಕೆಗೆ ಅವರ ಅಪ್ಪಣೆ ಬೇಕಾಗಿಲ್ಲ. ಡಿಪಿಆರ್ ಸಿದ್ಧವಾಗಿದ್ದು ನಮ್ಮ ಪ್ರಸ್ತಾವನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದಿದೆ. ಅಲ್ಲಿ ಒಪ್ಪಿಗೆ ಪಡೆದು ಯೋಜನೆ ಅನುಷ್ಠಾನ ಮಾಡಿಯೇ ತೀರುತ್ತೇವೆ.
|ಗೋವಿಂದ ಕಾರಜೋಳಜಲ ಸಂಪನ್ಮೂಲ ಸಚಿವ
ತಮಿಳುನಾಡು ನಿರ್ಣಯ ಕಾನೂನು ಬಾಹಿರ.ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಇದನ್ನು ರಾಜ್ಯದ ಜನತೆ, ಸರ್ಕಾರ ತೀವ್ರವಾಗಿ ಖಂಡಿಸುತ್ತದೆ.
|ಬಸವರಾಜ ಬೊಮ್ಮಾಯಿಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
