ಗುಹವಾಟಿ:ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ದೇಶಾದ್ಯಂತ ಹೆಚ್ಚಿನ ಜನರು ರೈಲಿನಲ್ಲಿ ಪ್ರಯಾಣಿಸುತ್ತಾರೆ. ಜ.20 ರಿಂದ 25ರವರೆಗೆ ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಹೊರಗಡೆ ಬರಬೇಡಿ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಯಶ್ ಅಭಿಮಾನಿಗಳ ದಾರುಣ ಸಾವು; ವಿಷಯ ತಿಳಿಯುತ್ತಿದ್ದಂತೆ ಸೂರಣಗಿ ಗ್ರಾಮಕ್ಕೆ ತೆರಳುತ್ತಿರುವ ಯಶ್
ಬಾರ್ಪೇಟಾದಲ್ಲಿ ಮದರಸಾದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು,”ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು, ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಬಹುದು. ಇದರಿಂದ ಮುಸ್ಲಿಂ ಸಮುದಾಯದ ಜನರನ್ನು ರಕ್ಷಿಸುವ ಕೆಲಸ ಆಗಬೇಕು” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
“ಜನವರಿ 20ರಿಂದ 25ರ ಅವಧಿಯಲ್ಲಿ ಜನರು ಬಸ್​, ರೈಲಿನಲ್ಲಿ ಆಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರು ಮನೆಯಿಂದ ಹೊರಗೆ ಬರುವುದು ಬೇಡ. ರೈಲಿನಲ್ಲಿ ಪ್ರಯಾಣಿಸಬೇಡಿ” ಎಂದರು.
ಇದನ್ನೂ ಓದಿ:BBKS10: ‘ಕನ್ನಡ ಸುಂದರ ಭಾಷೆ’! ಅನಿವಾಸಿ ಕನ್ನಡಿಗರಿಗೆ ಮೈಕಲ್​ ಕೊಟ್ಟ ಖಡಕ್ ಸಲಹೆ ಹೀಗಿದೆ
ಇದೀಗ ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಜ.22ರಂದು ರಾಮ ಮಂದಿರದ ಗರ್ಭ ಗೃಹದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ದೇಶದ ಕೋಟ್ಯಂತರ ರಾಮನ ಭಕ್ತರು ಶ್ರೀರಾಮ ಮಂದಿರ ಲೋಕಾರ್ಪಣೆ, ಪ್ರಾಣ ಪ್ರತಿಷ್ಠಾನೆಯ ಧಾರ್ಮಿಕ ಕಾರ್ಯಗಳನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ,(ಏಜೆನ್ಸೀಸ್).
BBKS10: ‘ಕನ್ನಡ ಸುಂದರ ಭಾಷೆ’! ಅನಿವಾಸಿ ಕನ್ನಡಿಗರಿಗೆ ಮೈಕಲ್​ ಕೊಟ್ಟ ಖಡಕ್ ಸಲಹೆ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fifteen =
Remember me
