ಬೆಂಗಳೂರು:ಚಲಿಸುತ್ತಿದ್ದ ಕಾರಿನಲ್ಲಿ ಡ್ಯಾನ್ಸ್ ಮಾಡಿ ಅವಾಂತರ ಸೃಷ್ಟಿಸಿದ್ದ ನಾಲ್ವರು ಮಲಯಾಳಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಲಪ್ಪುರಂನ ಸಲ್ಮಾನ್ ಫಾರಿಸ್(24), ನಸೀಮ್ ಅಬ್ಬಾಸ್ (21), ಸಲ್ಮಾನುಲ್ ಫಾರಿಸ್ (21) ಮತ್ತು ಮುಹಮ್ಮದ್ ನುಸೈಫ್ (21) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಬೆದರಿಸುವವ, ಅನೇಕ ಕೊಲೆಗಳಲ್ಲಿ ಭಾಗಿಯಾದವ: ಕೇರಳ ಸಿಎಂ ವಿರುದ್ಧ ರಾಜ್ಯಪಾಲ ಖಾನ್​ ವಾಗ್ದಾಳಿಬಂಧಿತರು ಕಳೆದ ಗುರುವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ತೆರಳುತ್ತಿದ್ದರು. ಹೆಬ್ಬಾಳ ಕೆಂಪಾಪುರದಿಂದ ಮುಂದಕ್ಕೆ ಎಕ್ಸ್‌ಪ್ರೆಸ್‌ವೇಯಲ್ಲಿ ಚಾಲನೆ ಮಾಡುವಾಗ ತಮ್ಮ ಕಾರಿನ ಸನ್‌ರೂಫ್ ಮತ್ತು ಕಿಟಕಿಗಳ ಮೂಲಕ ಹೊರಬಂದು ನೃತ್ಯ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ನೀಡಿದ್ದರು.
ಘಟನೆ ನಂತರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್​ ಆಗಿತ್ತು. ತಡವಾಗಿ ಇದನ್ನು ಕಂಡು ಕಾರ್ಯಪ್ರವೃತ್ತರಾದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಸಲ್ಮಾನ್ ಫಾರಿಸ್ ಹೊರತುಪಡಿಸಿ ಉಳಿದ ಆರೋಪಿಗಳು ಬೆಂಗಳೂರಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆ ನಡೆದ ದಿನ ಸ್ನೇಹಿತರನ್ನು ಭೇಟಿಯಾಗಲು ಸಲ್ಮಾನ್ ಫಾರಿಸ್ ಬೆಂಗಳೂರಿಗೆ ಬಂದಿದ್ದ. ಆತ ದೆಹಲಿಯಲ್ಲಿ ತನ್ನ ತಂದೆ ಖರೀದಿಸಿದ್ದ ಕಾರಿನಲ್ಲಿ ಬೆಂಗಳೂರಿಗೆ ಬಂದಿದ್ದ. ವಿಮಾನ ನಿಲ್ದಾಣಕ್ಕೆ ಜಾಲಿರೈಡ್‌ಗಾಗಿ ಹೋಗಿದ್ದೆವು ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಕ್ರಮಕ್ಕೆ ಆಗ್ರಹ :ಹೆಚ್ಚಿನ ವಾಹನ ದಟ್ಟಣೆ ಇರುವ ವಿಮಾನ ನಿಲ್ದಾಣ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಶರ್ಟ್‌ಗಳನ್ನು ಬಿಚ್ಚಿ ನೃತ್ಯ ಮಾಡುವ ಮೂಲಕ ಕಿರಿ ಕಿರಿ ಉಂಟು ಮಾಡಿದ್ದರು. ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಮುಂದೆ ಇಂತಹ ಘಟನೆಗಳು ನಡೆಯಬಾರದು, ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
