ರಾಯ್​ಪುರ:ನಕಲಿ ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದುಕೊಂಡಿರುವವರನ್ನು ಕೆಲಸದಿಂದ ತೆಗೆಯಬೇಕು ಎಂದು ಆಗ್ರಹಿಸಿ ಯುವಕರ ಗುಂಪೊಂದು ಬೆತ್ತಲಾಗಿ ಪ್ರತಿಭಟನೆ ನಡೆಸಿರುವ ಘಟನೆ ಛತ್ತೀಸ್​ಗಢದ ರಾಯ್​ಪುರದಲ್ಲಿ ನಡೆದಿದೆ.
ಛತ್ತೀಸ್​ಗಢದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಗಮನವನ್ನು ಸೆಳೆಯಲು ಯುವಕರು ಈ ರೀತಿ ಪ್ರತಿಭಟನೆ ನಡೆಸಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಮತ್ತು ಆಕ್ರೋಶಕ್ಕೆ ಗುರಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಯುವಕರ ಗುಂಪೊಂದು ಬಿತ್ತಿಪತ್ರಗಳನ್ನು ಹಿಡಿದು ರಸ್ತೆಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿರುವುದು ಕಂಡು ಬರುತ್ತದೆ. ಈ ವೇಳೆ ವಿವಿಐಪಿಯೊಬ್ಬರ ಕಾರೊಂದು ವಿಧಾನಸಭೆ ಆವರಣವನ್ನು ಪ್ರವೇಶಿಸುತ್ತಿರುವುದನ್ನು ಗಮನಿಸಿದ ಯುವಕರು ಅದನ್ನು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
छत्तीसगढ़ में आज विधानसभा सत्र शुरु हुआ है.जब VVIP विधानसभा जा रहे थे, उसी समय दर्जन भर नौजवान पूरी तरह से नग्न हो कर सड़कों पर आ गए.इन नौजवानों की माँग थी कि फ़र्ज़ी आरक्षण प्रमाण पत्र के आधार पर नौकरी कर रहे लोगों पर कार्रवाई की जाए.pic.twitter.com/e9gr8GuyXI
ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸಿ ಉದ್ಯೋಗ ಪಡೆದಿದ್ದಕ್ಕಾಗಿ ಛತ್ತೀಸ್​ಗಢದ ಸರ್ಕಾರವು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್​ ಒಬ್ಬರನ್ನು ಸೇವೆಯಿಂದ ಅಮಾನತು ಮಾಡಿತ್ತು. ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿತ್ತು.
ಈ ಸಂಬಂಧ ಪ್ರತಿಕ್ರಿಯಿಸಿರುವ ಪ್ರತಿಭಟನಾ ನಿರತರೊಬ್ಬರು ಸರ್ಕಾರಿ ನೌಕರಿ ಪಡೆಯಲು ಅಭ್ಯರ್ಥಿಗಳು ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸುತ್ತಿದ್ದಾರೆ. ಈ ಕುರಿತು ಹಲವು ಬಾರಿ ಮನವಿ ಹಾಗೂ ದೂರುಗಳನ್ನು ಸಲ್ಲಿಸಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ.
ಅರ್ಹತೆ ಇಲ್ಲದವರು ಜಾತಿ ಪ್ರಮಾಣಪತ್ರವನ್ನು ಇಟ್ಟುಕೊಂಡು ಎಲ್ಲಾ ಸಮಲತ್ತುಗಳನ್ನು ಅನುಭವಿಸುತ್ತಿದ್ದು, ಸರ್ಕಾರ ಅಂತಹ ನೌಕರರ ವಿರುದ್ಧ ಕ್ರಮಕೈಗೊಳ್ಳಲು ಹಿಂದೇಟು ಹಾಕುತ್ತಿರುವುದಕ್ಕೆ ಇಂದು ನಾವು ಈ ರೀತಿ ಪ್ರತಿಭಟಿಸಲು ಕಾರಣ ಎಂದು ಆಕಾಂಕ್ಷಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 4 =
Remember me
