ಭಾಗಲ್ಪುರ:ವ್ಯಕ್ತಿಯೊಬ್ಬ ಇಬ್ಬರನ್ನು ಕೊಂದು ವೃದ್ಧನ ಮೃತದೇಹವನ್ನು ಸುಮಾರು 500 ಮೀಟರ್ ದೂರದವರೆಗೆ ಎಳೆದೊಯ್ದಿರುವ ಭೀಕರ ಘಟನೆ ಬಿಹಾರದ ಭಾಗಲ್ಪುರದಲ್ಲಿ ಬೆಳಕಿಗೆ ಬಂದಿದೆ.ಹಗಲು ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಂತಕನನ್ನು ಮೊಹಮ್ಮದ್ ಆಜಾದ್ ಎಂದು ಗುರುತಿಸಲಾಗಿದ್ದು, ಫತೇಪುರ್ ಗ್ರಾಮದ ನಿವಾಸಿಯಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಇಟ್ಟಿಗೆ, ರಾಡ್ ಮತ್ತು ಕಬ್ಬಿಣದ ಸರಪಳಿಗಳಿಂದ ವೃದ್ಧ ಪುರುಷ ಮತ್ತು ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು, ಅವರಿಬ್ಬರೂ ಸತ್ತಿದ್ದಾರೆಂದು ಮನವರಿಕೆಯಾಗುವವರೆಗೂ ಹೊಡೆದ ಬಳಿಕ ಆತ ಮುದುಕನ ಮೃತದೇಹವನ್ನು ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗಲಾರಂಭಿಸಿದ್ದಾನೆ.ಇದನ್ನೂ ಓದಿ:ಪಾರ್ಕ್​ನಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಪಿಟ್​ಬುಲ್​ ನಾಯಿ ದಾಳಿ..ಈ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಹಂತಕನನ್ನು ಪೊಲೀಸರು ಬಂಧಿಸಿದ್ದು, ಈ ಘಟನೆಯು ಆಗಸ್ಟ್ 15ರಂದು ಮುಂಜಾನೆ ಭಾಗಲ್ಪುರದಲ್ಲಿ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ವಲ್ಪ ಸಮಯದ ನಂತರ ಹಂತಕನು ಸತ್ತ ವ್ಯಕ್ತಿಗಳನ್ನು ನಿಂದಿಸಲು ಪ್ರಾರಂಭಿಸಿದ್ದು, ಗಲಾಟೆ ಕೇಳಿದ ಕೆಲ ಗ್ರಾಮಸ್ಥರು ಸೇರಿ ಆತನಿಗೆ ಥಳಿಸಿ ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಹಂತಕನನ್ನು ಬಂಧಿಸಿದ್ದು ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಮಾಹಿತಿ ಪ್ರಕಾರ, ವೃದ್ಧರನ್ನು ಕೊಂದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದು, ಆತನನ್ನು ಕಳೆದ ಕೆಲವು ದಿನಗಳಿಂದ ಆತನ ಕುಟುಂಬಸ್ಥರು ಮನೆಯಲ್ಲಿ ಸರಪಳಿಯಿಂದ ಬಂಧಿಸಿದ್ದರು. ಆದರೆ ಘಟನೆ ನಡೆಯುವ ಮೂರು ದಿನಗಳ ಹಿಂದೆ ಆತ ಪರಾರಿಯಾಗಿದ್ದ. ಈತನಿಗೆ ಮದುವೆಯಾಗಿ ನಾಲ್ಕು ಮಕ್ಕಳಿದ್ದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
