ಜೈಪುರ:ಆಘಾತಕಾರಿ ಘಟನೆಯೊಂದರಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಗುಂಪೊಂದು ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಜೈಪುರದ ಸಂಗ್ನೇರ್​ನಕಲ್ಲಿರುವ ಕಲ್ಯಾಣ್​ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಗಾಯಗೊಂಡಿರುವ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜೈಪುರದ ಸಂಗ್ನೇರ್​ನ ಮಾಲ್ಪುರ ಪೊಲೀಸ್​ ಠಾಣಾ ವ್ಯಾಪ್ತಿಯ ಕಲ್ಯಾಣ್​ ಕಾಲೋನಿಯಲ್ಲಿ ವಾಸಿಸುವ ಮಹಿಳೆ ಮಾನಸಿಕ ಅಸ್ವಸ್ಥರಾಗಿದ್ದು, ಮೊದಲಿಗೆ ತಮ್ಮ ಮನೆಯ ಮೇಲೆ ಬಿಜೆಪಿ ಪಕ್ಷದ ಚಿಹ್ನೆಯನ್ನು ಬಿಡಿಸಿ ಧರ್ಮ ಒಂದರ ಕುರಿತು ಅವಹೇಳನಕಾರಿಯಾಗಿರುವ ಪೋಸ್ಟರ್​ಗಳನ್ನು ಅಂಟಿಸಿದ್ದರು.
#Jaipur,#Rajasthan: Nasir, Rashid, Arif, Irfan, Ikram, Ejaz, and Kalam, ambushed a woman, brutally beat her, threw her in mud.While#ManipurVideobecame a viral sensation, this incident cries for justice since 20th#July. Not one media reported🆘🔺@AngrySaffronpic.twitter.com/L4KafSTZcd
ಇದನ್ನೂ ಓದಿ:ಆಗಸ್ಟ್​ 3ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ
ಕೆಲ ದಿನಗಳ ಬಳಿಕ ಮುಸ್ಲಿಂ ಪವಿತ್ರ ಗ್ರಂಥವಾದ ಕುರಾನ್​ಅನ್ನು ಮಹಿಳೆ ಸುಟ್ಟು ಹಾಕಿದ್ದರು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ. ಇದರಿಂದ ಉದ್ರಿಕ್ತಗೊಂಡ ಜನ ಮಹಿಳೆಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಮಾಲ್ಪುರ ಪೊಲೀಸ್​ ಠಾಣಾ ಸಿಬ್ಬಂದಿ ಮಹಿಳೆಯನ್ನು ಗುಂಪಿನಿಮದ ರಕ್ಷಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ಸಂಬಂಧ ಪೊಲೀಸರು ನಾಸಿರುದ್ದೀನ್​, ರಶೀದ್​, ಮುಷ್ತಾಕ್​, ಇರ್ಫಾನ್​ ಖಾನ್​, ಅಜಾಸ್​ ಖಾನ್​, ಇಕ್ರಂ ದೇಶವಾಲಿ, ಕಲಾಮುದ್ದೀನ್​ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 11 =
Remember me
