ನವದೆಹಲಿ:ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್‌ನ ಪೋಷಕ ಸಂಸ್ಥೆಯಾದ ಮೆಟಾ ಮತ್ತೊಂದು ಸುತ್ತಿನ ಉದ್ಯೋಗ ಕಡಿತವನ್ನು ಘೋಷಣೆ ಮಾಡಿದೆ.
ಉದ್ಯೋಗ ಕಡಿತ ಪ್ರಕ್ರಿಯೆಯೂ ಮುಂದಿನ ವಾರದಿಂದ ಆರಂಭವಾಗುತ್ತದೆ ಎಂದು ಮೆಟಾ ಸಂಸ್ಥೆಯ ಜಾಗತಿಕ ವ್ಯವಹಾರಗಳ ಅಧ್ಯಕ್ಷ ನಿಕ್​ ಕ್ಲೆಗ್​ ತಿಳಿಸಿದ್ದಾರೆ.
ಇತ್ತೀಚಿಗೆ ಮೆಟಾ ಸಂಸ್ಥೆಯ ಸಿಇಒ ಮಾರ್ಕ್​ ಜುಕರ್​ಬರ್ಗ್​ ಮೇ ತಿಂಗಳಲ್ಲಿ ಉದ್ಯೋಗ್ ಕಡಿತ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಈ ಆದೇಶವನ್ನು ಹೊರಡಿಸಲಾಗಿದೆ.
ಸುಮಾರು 6,000 ಸಾವಿರ ಜನರನ್ನು ಉದ್ಯೋಗದಿಂದ ಕಡಿತ ಮಾಡಲಾಗುವುದು ಎಮದು ಸಂಸ್ಥೆಯ ಅಧಿಕೃತ ಸುದ್ದಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ; ಸಂಚಾರ ಮಾರ್ಗ ಮಾರ್ಪಾಡು
ಕಳೆದ ವರ್ಷ ನವೆಂಬರ್​ನಲ್ಲಿ ಸಂಸ್ಥೆಯೂ 11,000 ಸಾವಿರ, ಮಾರ್ಚ್​ 2023ರಲ್ಲಿ 10,000 ಸಾವಿರ ಉದ್ಯೊಗಗಳನ್ನು ಕಡಿತ ಮಾಡಲಾಗುವುದು ಎಂದು ಸಂಸ್ಥೆ ಹೇಳಿತ್ತು. ಅದರಂತೆ ಏಪ್ರಿಲ್​ ತಿಂಗಳಲ್ಲಿ 4,000ಸಾವಿರ ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.
ಮೆಟಾದಲ್ಲಿ ಕೆಲಸ ಮಾಡುತ್ತಿರುವ ಹಿರಿಯ ಅಧಿಕಾರಿಗಳು ಶೀಘ್ರದಲ್ಲೇ ನೋಟಿಸ್​ ಕಳುಹಿಸಲಿದ್ದಾರೆ. ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಯಾವ ತಂಡದ ಮೇಲೆ ಇದು ಪರಿಣಾಮ ಬೀರುತ್ತದೆ ಎಂಬುದರ ಕುರಿತು ತಿಳಿಸಲಿದ್ದಾರೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
