ನವದೆಹಲಿ:ಸೆಪ್ಟಂಬರ್​ 1ರಿಂದ ಜಾರಿಗೆ ಬರಲಿರುವ ನಾಲ್ಕನೇ ಹಂತದ ನಿರ್ಬಂಧ ಸಡಿಲಿಕೆ (ಅನ್​ಲಾಕ್​ 4.0) ವೇಳೆ ಮೆಟ್ರೋ ಸಂಚಾರ ಬಹುತೇಕ ಆರಂಭವಾಗಲಿದೆ. ಆದರೆ, ಶಾಲಾ-ಕಾಲೇಜುಗಳು ಮುಚ್ಚಿರಲಿವೆ.
ಕೇಂದ್ರ ಗೃಹ ಇಲಾಖೆ ಅನ್​ಲಾಕ್​ 4.0 ಮಾರ್ಗಸೂಚಿಗಳನ್ನು ಸಿದ್ಧಪಡಿಸಿದ್ದು, ದೇಶಾದ್ಯಂತ ಮೆಟ್ರೋ ರೈಲುಗಳ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳ ಮೂಲದಿಂದ ತಿಳಿದು ಬಂದಿದೆ.
ಕರೊನಾ ಸಂಕಷ್ಟವನ್ನು ನಿಗ್ರಹಿಸಲು ದೇಶಾದ್ಯಂತ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ ತೆರವು ಮಾಡಲಾಗುತ್ತಿದೆ. ನಾಲ್ಕನೇ ಹಂತದ ಲಾಕ್​ಡೌನ್​ ತೆರವು ವೇಳೆ ಇನ್ನಷ್ಟು ವಿನಾಯ್ತಿ ನೀಡಲಾಗುತ್ತಿದೆ.
ಇದನ್ನೂ ಓದಿ;73 ದಿನಗಳಲ್ಲಿ ಬಳಕೆಗೆ ಸಿಗುತ್ತಾ ‘ಕೋವಿಶೀಲ್ಡ್’​ ಕರೊನಾ ಲಸಿಕೆ? ಭಾರತೀಯ ಉತ್ಪಾದಕರ ವಾದವೇನು?
ಸೆಪ್ಟಂಬರ್​ ಒಂದರಿಂದ ಮೆಟ್ರೋ ರೈಲು ಸಂಚಾರಕ್ಕೆ ಚಾಲನೆ ದೊರೆಯಲಿದೆ. ಆದರೆ, ತಕ್ಷಣಕ್ಕೆ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳ ಆರಂಭ ದೂರದ ಮಾತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಂತಹಂತವಾಗಿ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿ ನೀಡುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ನಿನ್ನೆಯಷ್ಟೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.ಸದ್ಯ ಹೋಟೆಲ್​ ಹಾಗೂ ರೆಸ್ಟೋರಂಟ್​ಗಳನ್ನು ತೆರೆಯಲು ಈಗಾಗಲೇ ಅನುಮತಿ ನೀಡಲಾಗಿದೆ. ಮುಂದಿನ ಹಂತದಲ್ಲಿ ಮದ್ಯ ಪೂರೈಕೆಗೂ ಅವಕಾಶ ದೊರೆಯಬಹುದು. ಆದರೆ, ಸಾರ್ವಜನಿಕ ಸಭೆ- ಸಮಾರಂಭಗಳ ಮೇಲೆ ವಿಧಿಸಲಾಗಿರುವ ನಿರ್ಬಂಧ ಮುಂದುವರಿಯಲಿದೆ.
ಇದನ್ನೂ ಓದಿ;ವಾಹನ ಸವಾರರಿಗೆ ಶುಭ ಸುದ್ದಿ; ಡಿ.31ರವರೆಗೂ ಲೈಸೆನ್ಸ್​, ದಾಖಲೆಗಳ ಮಾನ್ಯತಾ ಅವಧಿ ವಿಸ್ತರಣೆ
ಕೇಂದ್ರ ಸರ್ಕಾರ ಮತ್ತಷ್ಟು ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡುವ ನಿರೀಕ್ಷೆ ಇದ್ದು, ಜನ ಹಾಗೂ ವಾಹನಗಳ ಸಂಚಾರದ ಮೇಲೆ ನಿರ್ಬಂಧ ವಿಧಿಸದಂತೆ ಈಗಾಗಲೇ ರಾಜ್ಯಗಳಿಗೆ ಸೂಚಿಸಿದೆ.
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಸಾವು? ಇನ್ನು ಸಹೋದರಿಯದ್ದೇ ಆಧಿಪತ್ಯ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − sixteen =
Remember me
