ನವದೆಹಲಿ: ‘ಮೆಟ್ರೊ ಮ್ಯಾನ್’ ಎಂದು ಖ್ಯಾತಿಯಾಗಿರುವ ದೆಹಲಿ ಮೆಟ್ರೊ ಮಾಜಿ ಮುಖ್ಯಸ್ಥ ಇ ಶ್ರೀಧರನ್ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಲು ಅಣಿಯಾಗಿದ್ದಾರೆ.
ಅವರು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಮುಂಬರುವ ತಿಂಗಳುಗಳಲ್ಲಿ ಕೇರಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆ ಚುನಾವಣೆಯಲ್ಲಿ ಶ್ರೀಧರನ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಕೇರಳ ಚುನಾವಣೆಯಲ್ಲಿ ಶತಾಯ ಗತಾಯ ಅಧಿಕಾರ ಹಿಡಿಯಬೇಕು ಎಂಬ ತಯಾರಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಬಿಜೆಪಿ ಹಲವರಿಗೆ ಗಾಳ ಹಾಕಿದೆ. ಮುಂದಿನ ವಾರ ಕೇರಳದಲ್ಲಿ ಬಿಜೆಪಿ ಆಯೋಜಿಸಿರುವ ವಿಜಯ ಯಾತ್ರೆಯಲ್ಲಿ ಶ್ರೀಧರನ್ ಅವರು ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.
88ರ ವಯೋಮಾನದ ಶ್ರೀಧರನ್ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರು. ಭಾರತದ ದೆಹಲಿ ಮೆಟ್ರೋ ಸೇರಿದಂತೆ ಇತರ ನಗರಗಳ ಮೆಟ್ರೋ ಯೋಜನೆ ಹಾಗೂ ಮಹತ್ವದ ರೈಲು ಯೋಜನೆಗಳಲ್ಲಿ ಶ್ರೀಧರನ್ ಪಾತ್ರ ತುಂಬಾ ದೊಡ್ಡದಿದೆ. ಅದ್ಭುತ ಎಂಜಿನಿಯರ್ ಆಗಿರುವ ಅವರನ್ನು ಮೆಟ್ರೊ ಮ್ಯಾನ್ ಎಂದೇ ಕರೆಯಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
